×
Ad

ಒಬ್ಬ ವ್ಯಕ್ತಿಯ ಮಾನಸಿಕ ಆರೋಗ್ಯವು ಆತನು ನಿರ್ವಹಿಸುವ ಕೆಲಸ ಕಾರ್ಯಗಳ ಮೇಲೆ ಅವಲಂಬನೆಯಾಗಿರುತ್ತದೆ : ನ್ಯಾ.ಮರಿಯಪ್ಪ

Update: 2025-02-27 16:51 IST

ಯಾದಗಿರಿ : ಮಾನಸಿಕ ಆರೋಗ್ಯವೆಂಬುದು ನಮ್ಮ ಭಾವನೆಗಳ ಅಭಿವ್ಯಕ್ತಿಯಾಗಿದ್ದು, ಬೇಡಿಕೆಗಳ ವ್ಯಾಪ್ತಿಗೆ ಯಶಸ್ವಿಯಾಗಿ ಹೊಂದಿಕೊಳ್ಳುವುದಾಗಿರುತ್ತದೆ. ಒಬ್ಬ ವ್ಯಕ್ತಿಯ ಮಾನಸಿಕ ಆರೋಗ್ಯವು ಆತನು ನಿರ್ವಹಿಸುವ ಕೆಲಸ ಕಾರ್ಯಗಳ ಮೇಲೆ ಅವಲಂಬನೆಯಾಗಿರುತ್ತದೆ ಎಂದು ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೌರವಾನ್ವಿತ ಮರಿಯಪ್ಪ ಅವರು ಹೇಳಿದರು.

ಯಾದಗಿರಿ ನಗರದ ಶ್ರೀ ಶಕ್ತಿ ಭವನದಲ್ಲಿ ಫೆ.25ರಂದು ನಡೆದ ಬೆಂಗಳೂರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಯುಕ್ತಾಶ್ರಯದಲ್ಲಿ ಯಾದಗಿರಿ ಶಿಶು ಅಭಿವೃದ್ಧಿ ಇಲಾಖೆಯದಿಂದ ಮಕ್ಕಳಿಗಾಗಿ ಮಕ್ಕಳ ಸ್ನೇಹಿ ಕಾನೂನು ಸೇವೆಗಳು ಮತ್ತು ಮಾನಸಿಕ ಅಸ್ವಸ್ಥ ಹಾಗೂ ಬೌದ್ಧಿಕ ಅಸಾಮರ್ಥ್ಯ ಹೊಂದಿರುವ ವ್ಯಕ್ತಿಗಳಿಗೆ ಇರುವ ಕಾನೂನು ಸೇವೆಗಳ ಬಗ್ಗೆ ಐSU-ಅ, ಐSU-ಒ ಸಮಿತಿ ಸದಸ್ಯರುಗಳಿಗೆ, ಪ್ಯಾನಲ್ ವಕೀಲರಿಗೆ ಹಾಗೂ ಸ್ವಯಂ ಸೇವಕರಿಗೆ, ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಾನಸಿಕ ಆರೋಗ್ಯವೆಂಬುದು ನಮ್ಮ ಭಾವನೆಗಳ ಅಭಿವ್ಯಕ್ತಿಯಾಗಿದ್ದು, ಬೇಡಿಕೆಗಳ ವ್ಯಾಪ್ತಿಗೆ ಯಶಸ್ವಿಯಾಗಿ ಹೊಂದಿಕೊಳ್ಳುವುದಾಗಿರುತ್ತದೆ. ಒಬ್ಬ ವ್ಯಕ್ತಿಯ ಮಾನಸಿಕ ಆರೋಗ್ಯವು ಆತನು ನಿರ್ವಹಿಸುವ ಕೆಲಸ ಕಾರ್ಯಗಳ ಮೇಲೆ ಅವಲಂಬನೆಯಾಗಿರುತ್ತದೆ. ವಿಪರೀತ ಒತ್ತಡಗಳ ಸಂದರ್ಭದಲ್ಲಿ ಮನುಷ್ಯನ ಮಾನಸಿಕ ಚಿತ್ತವು ಹಾಳಾಗುವ ಸಾಧ್ಯತೆ ಇರುತ್ತದೆ. ಮಾನಸಿಕ ಆರೋಗ್ಯಕರ ಸ್ಥಿತಿಯನ್ನು ಸಾಮಾನ್ಯವಾಗಿ ಸಕಾರಾತ್ಮಕ ಶಿಕ್ಷಣದ ರೂಪದಲ್ಲಿ ನೋಡಲಾಗುತ್ತದೆ. ವ್ಯಕ್ತಿಯು ಗುರುತಿಸಬಲ್ಲ ಯಾವುದೇ ಮಾನಸಿಕ ಆರೋಗ್ಯ ಸ್ಥಿತಿಯನ್ನು ಹೊಂದಿರದಿದ್ದರೂ ಕೂಡ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಬೇಕಾಗಿರುವುದು ಅತೀ ಮುಖ್ಯವಾಗಿರುತ್ತದೆ ಎಂದು ತಿಳಿಸಿದರು.

ಯಾದಗಿರಿ ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ ಮನೋವೈದ್ಯ ಡಾ.ಅಮೀತ್ ಕುಮಾರ ಕಾಳಗಿ ಅವರು ಮಾತನಾಡಿ, ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ 100 ಕ್ಕೆ ಶೇ.10 ರಷ್ಟು ಜನರು ಅಲ್ಪಮಟ್ಟದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆ. ಖಿನ್ನತೆ, ಆತಂಕ, ಮನೋಗೀಳು ರೋಗ, ಮನೋದೈಹಿಕ ಬೇನೆಗಳು, ವ್ಯಕ್ತಿತ್ವ ದೋಷಗಳು 100 ಕ್ಕೆ ಶೇ.1 ರಷ್ಟು ಜನರು ತೀವ್ರತರದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆ. ಚಿತ್ತವಿಕಲತೆ ಸ್ವೀಜೋಫ್ರೆನಿಯಾ, ಬೈಪೋಲಾರ್. ಮನೋವಿಕಲತೆ ಮರುವಿನ ರೋಗ ಮತ್ತು ಮಾದಕ ವಸ್ತುಗಳ ವ್ಯಸನಗಳ ಪರಿಣಾಮವಾಗಿ ಬರುವಂತಹ ಮಾನಸಿಕ ಕಾಯಿಲೆಗಳ ಬಗ್ಗೆ ಮಾಹಿತಿ ನೀಡಿದರು.

ಚಿಕಿತ್ಸಾ ಮನೋಶಾಸ್ತ್ರ ತಜ್ಞ ಮಲ್ಲಿಕಾರ್ಜುನ ಮ್ಯಾಗೇರಿ ಅವರು ಮಾತನಾಡಿ, ಒಬ್ಬ ವ್ಯಕ್ತಿವು ಸಾಮಾಜಿಕ ಮತ್ತು ಕೌಟುಂಬಿಕ ವ್ಯವಸ್ಥೆಯಲ್ಲಿ ಜೀವಿಸಬೇಕಾದರೆ ದೈಹಿಕ ಆರೋಗ್ಯ ಹೇಗೆ ಮುಖ್ಯವೋ, ಅದೇ ರೀತಿ ಮಾನಸಿಕ ಆರೋಗ್ಯವೂ ಕೂಡ ಅಷ್ಟೆ ಪ್ರಾಮುಖ್ಯವಾಗಿದೆ. ಆದ್ದರಿಂದ ಮಾನಸಿಕ ಗೊಂದಲಗಳ ಪರಿಹಾರಕ್ಕಾಗಿ 14416 ಶುಲ್ಕ ರಹಿತ ದೊರವಾಣಿ ಸಂಖ್ಯೆಗೆ ಟೇಲಿ ಮಾನಸ್‌ಗೆ ಕರೆ ಮಾಡಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ತಿಳಿಸಿದರು.

ಮಾನಸಿಕ ಆರೋಗ್ಯ ಶಿಕ್ಷಣದ ಸಂಯೋಜಕರಾದ ಶರಣಪ್ಪ ಸಿ.ಅಮರಪುರ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಪ್ಯಾನೇಲ್ ವಕೀಲರು ಕಾನೂನು ಸ್ವಯಂ ಸೇವಕರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News