×
Ad

ಬಿಜೆಪಿ ಜೊತೆಗಿನ ಮೈತ್ರಿ ಮರು ಪರಿಶೀಲನೆ ಮಾಡಲಿ: ಜೆಡಿಎಸ್ ಶಾಸಕ ಶರಣಗೌಡ ಕಂದಕೂರು

Update: 2024-03-19 19:21 IST

Photo : facebook.com

ಯಾದಗಿರಿ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಜೊತೆ ಮಾಡಿಕೊಂಡಿರುವ ಮೈತ್ರಿಯನ್ನು ನಮ್ಮ ಪಕ್ಷ ಮರು ಪರಿಶೀಲನೆ ಮಾಡಲಿ ಎಂದು ಜೆಡಿಎಸ್‍ನ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರು ಅಭಿಪ್ರಾಯಪಟ್ಟಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮೈತ್ರಿ ಧರ್ಮ ಪಾಲನೆ ಮಾಡುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಎರಡು ಬಾರಿ ಬಂದರೂ ಜೆಡಿಎಸ್ ನಾಯಕರನ್ನು ಸಮಾವೇಶಗಳಿಗೆ ಆಹ್ವಾನ ನೀಡದಿರುವುದು ಸರಿಯಲ್ಲ ಎಂದರು.

ಎರಡು, ಮೂರು ಸೀಟುಗಳನ್ನು ಅಂಗಲಾಚಿ ತೆಗೆದುಕೊಳ್ಳುವಂತಹ ದುಸ್ಥಿತಿ ಜೆಡಿಎಸ್ ಪಕ್ಷಕ್ಕೆ ಬಂದಿಲ್ಲ. ನಮ್ಮ ನಾಯಕರು ಮತ್ತೊಮ್ಮೆ ಬಿಜೆಪಿ ಜೊತೆ ಮಾಡಿಕೊಂಡಿರುವ ಮೈತ್ರಿಯನ್ನು ಮರು ಪರಿಶೀಲನೆ ಮಾಡಬೇಕು ಎಂದು ಶರಣಗೌಡ ಕಂದಕೂರು ಆಗ್ರಹಿಸಿದರು.

ನನಗೆ ನನ್ನ ಕಾರ್ಯಕರ್ತರೇ ಅಂತಿಮ. ಹೋಳಿ ಹಬ್ಬದ ಬಳಿಕ ಕಾರ್ಯಕರ್ತರ ಸಮ್ಮುಖದಲ್ಲಿ ಸಭೆ ಮಾಡಿ, ಸ್ಥಳೀಯವಾಗಿ ಏನು ಮಾಡಬೇಕು ಎಂಬುದರ ಕುರಿತು ನಿರ್ಧಾರ ಕೈಗೊಳ್ಳುತ್ತೇನೆ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News