×
Ad

ಯಾದಗಿರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಧರಣಿ

Update: 2025-08-12 22:27 IST

ಯಾದಗಿರಿ: ಎಪ್ರಿಲ್ 2025 ರಿಂದ ಅನ್ವಯವಾಗುವಂತೆ ಪ್ರತಿ ತಿಂಗಳು ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಠ 10 ಸಾವಿರ ಗೌರವಧನ ನೀಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ(ರಿ) ಯಾದಗಿರಿ ಜಿಲ್ಲಾ ಸಮಿತಿ ಜಿಲ್ಲಾಧಿಕಾರಿಗಳ ಕಛೇರಿ ಎದುರು ಧರಣಿ ಮಾಡಲಾಯಿತು.

ಇದೇ ವೇಳೆ ಸಂಘದ ಜಿಲ್ಲಾಧ್ಯಕ್ಷೆ ಡಿ ಉಮಾದೇವಿ ಮಾತನಾಡಿ, ಜನವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕನಿಷ್ಠ 10 ಸಾವಿರ ರೂ.ಗೌರವಧನ ನೀಡುತ್ತೇವೆ ಎಂದು ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಡಲಾಯಿತು. ಆದರೆ ಈವರೆಗೂ 10ಸಾವಿರ ಗೌರವಧನ ಜಾರಿ ಮಾಡಿಲ್ಲ. ಬಜೆಟ್ ನಲ್ಲೂ ಸಹ ಘೋಷಣೆ ಮಾಡದೆ ನಮಗೆ ಮೋಸ ಮಾಡಿದ್ದಾರೆ. ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಅದಕ್ಕಾಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕಿದೆ. ಘೋಷಣೆ ಮಾಡಿದ 10 ಸಾವಿರ ಗೌರವಧನವನ್ನು ಕೂಡಲೇ ಜಾರಿ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಗೆ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ದೇವಕ್ಕಿ ವನದುರ್ಗ, ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ರಾಮಲಿಂಗಪ್ಪ ಬಿ.ಎನ್, ಪುಷ್ಪಲತಾ, ನೀಲಮ್ಮ, ತಾಯಮ್ಮ , ಶಾಂತವ್ವ, ನಿಂಗಮ್ಮ, ಅಮೃತ, ದಾನಮ್ಮ, ಗೀತಾ, ಮೀನಾಕ್ಷಿ, ಗೌರಮ್ಮ, ಶಾರದಾದೇವಿ, ಪುಷ್ಪಲತಾ ಸೇರಿದಂತೆ ನೂರಾರು ಆಶಾ ಕಾರ್ಯಕರ್ತೆಯರು ಧರಣಿಯಲ್ಲಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News