ಪ್ರತಿ ಎಕರೆಗೆ 25 ರಿಂದ 30 ಸಾವಿರ ರೂ. ಪರಿಹಾರ ಘೋಷಣೆ ಮಾಡಬೇಕು : ಬಿ.ವೈ.ವಿಜಯೇಂದ್ರ
ಶಹಾಪುರ: ಜಿಲ್ಲೆಯ ಸುರಿದ ಸತತ ಮಳೆಯಿಂದ ಮತ್ತು ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ಪ್ರತಿ ಎಕರೆಗೆ 25 ರಿಂದ 30 ಸಾವಿರ ರೂ. ಪರಿಹಾರ ಕೂಡಲೇ ನೀಡಬೇಕೆಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.
ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಅಮೀನ್ ರೆಡ್ಡಿ ಯಾಳಗಿ ಅವರ ಮನೆಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ತಿಂಗಳಿಂದ ಾಗುತ್ತಿರುವ ಸತತ ಮಳೆ ಹಾಗೂ ಪ್ರವಾಹದಿಂದ ಜಿಲ್ಲೆಗಳಲ್ಲಿ ಶೇ.70 ರಷ್ಟು ರೈತ ಬೆಳೆಗಳು ಹಾಳಾಗಿವೆ. ಆದರೆ ರಾಜ್ಯ ಸರ್ಕಾರ ಈ ಕುರಿತು ತಕ್ಷಣ ಕ್ರಮ ತೆಗೆದುಕೊಳ್ಳದೇ, ಸಭೆ, ವೈಮಾನಿಕ ಸಮೀಕ್ಷೆ ಎಂಬ ಕಾರಣದಿಂದ ಕಾಲಹರಣ ಮಾಡುತ್ತಿದೆ ಎಂದು ದೂರಿಸಿದರು.
ಹಾನಿಗೊಂಡ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಕಂದಾಯ ಮತ್ತು ಕೃಷಿ ಸಚಿವರು ಜಿಲ್ಲೆ ಕಡೆ ಗಮನ ಹರಿಸುತ್ತಿಲ್ಲ. ಹಿಂದಿನ ಸಿಎಂ ಯಡಿಯೂರಪ್ಪ ಹೀಗಾದ ಸಂದರ್ಭದಲ್ಲಿ ತಕ್ಷಣ ಭೇಟಿ ನೀಡಿ ಪರಿಹಾರ ಘೋಷಿಸುತ್ತಿದ್ದರು. ಇತ್ತೀಚಿನ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಈ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ. ರೈತರಿಗೆ ಸ್ಪಂದನೆ ಸಿಗುತ್ತಿಲ್ಲ ಎಂದು ಆರೋಪಿಸಿದರು.
ರಾಜ್ಯ ಸರ್ಕಾರ ಕೂಡಲೇ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಬೆಳೆ ಹಾನಿ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒತ್ತಾಯಿಸಿದರು.
ಮೊದಲು ತಕ್ಷಣದ ಪರಿಹಾರ ನೀಡುವುದೇ ಮುಖ್ಯ. ಕೇಂದ್ರ ಸರ್ಕಾರ ಕೂಡಿದಷ್ಟು ಸಹಾಯ ಮಾಡುತ್ತದೆ. ನಾವು ಈ ಕುರಿತು ಮಾಹಿತಿ ನೀಡಿ, ರೈತರ ಪರಿಸ್ಥಿತಿಯನ್ನು ತಿಳಿಸುತ್ತೇವೆ ಎಂದು ಹೇಳಿದರು.
ಈ ವೇಳೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ನಾರಾಯಣ ಸ್ವಾಮಿ, ಮಾಜಿ ಸಚಿವ ರಾಜುಗೌಡ ನಾಯಕ, ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ, ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ ಎಸ್ ಪಾಟೀಲ್ ನಡಹಳ್ಳಿ, ರಾಜ್ಯ ಕಾರ್ಯದರ್ಶಿ ಮತ್ತು ನಗರಸಭೆ ಅಧ್ಯಕ್ಷೆ ಕು.ಲಲಿತಾ ಅನಪುರ, ಮಾಜಿ ವಿಧಾನ ಪರಿಷತ್ ಸದಸ್ಯ ಅಮರನಾಥ ಪಾಟೀಲ್, ಮಾಜಿ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ, ಮಾಜಿ ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರಡ್ಡಿ, ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ, ಯುವ ಮುಖಂಡ ಮಹೇಶರಡ್ಡಿ ಮುದ್ನಾಳ, ನಾಗರತ್ನ ಕುಪ್ಪಿ, ಚಂದ್ರಶೇಖರಗೌಡ ಮಾಗನೂರ, ದೇವಿಂದ್ರನಾಥ ನಾದ, ದೇವರಾಜ ನಾಯಕ ಉಳ್ಳೆಸೂಗುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮ ಮತ್ತು ಪರುಶುರಾಮ ಕುರಕುಂದಿ ಹಾಗೂ ಮೆಲಪ್ಪ ಗುಳಗಿ, ಜಿಲ್ಲಾ ವಕ್ತಾರ ಹಣಮಂತ ಇಟಗಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.