×
Ad

ಛಲವಾದಿ ನಾರಾಯಣಸ್ವಾಮಿಗೆ ಜೀವ ಬೆದರಿಕೆ ಆರೋಪ | ಆರೋಪಿಗಳನ್ನು ತಕ್ಷಣ ಬಂಧಿಸದಿದ್ದರೆ ಪ್ರತಿಭಟನೆ : ಪರಶುರಾಮ ಕುರಕುಂದಿ

Update: 2026-01-06 20:05 IST

ಯಾದಗಿರಿ : ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಜೀವ ಬೆದರಿಕೆ ಹಾಕಿರುವ ಘಟನೆಗೆ ಸಂಬಂಧಿಸಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ವೆಂಕಟೇಶ್ ಅಪ್ಪು ಎಂಬ ಹೆಸರಿನ ಫೇಸ್‌ಬುಕ್ ಐಡಿ ಮೂಲಕ ಜೀವ ಬೆದರಿಕೆ ಸಂದೇಶಗಳನ್ನು ಕಳುಹಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ತಕ್ಷಣವೇ ಬಂಧಿಸದಿದ್ದರೆ ಯಾದಗಿರಿ ಜಿಲ್ಲೆದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಶುರಾಮ ಕುರಕುಂದಿ ಎಚ್ಚರಿಕೆ ನೀಡಿದ್ದಾರೆ.

ಸಂವಿಧಾನಾತ್ಮಕ ಹುದ್ದೆ ಹೊಂದಿರುವ ವಿರೋಧ ಪಕ್ಷದ ನಾಯಕನಿಗೆ ಜೀವ ಬೆದರಿಕೆ ಹಾಕುವುದು ಅತ್ಯಂತ ಗಂಭೀರ ಅಪರಾಧ. ಇಂತಹ ಕೃತ್ಯಗಳು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ನೇರ ಧಕ್ಕೆ ತರುತ್ತವೆ. ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಪಡಿಸಿಕೊಂಡು ಭಯ ಸೃಷ್ಟಿಸುವ ಪ್ರಯತ್ನವನ್ನು ಯಾವತ್ತೂ ಸಹಿಸಲಾಗುವುದಿಲ್ಲ ಎಂದು ಅವರು ಹೇಳಿದರು.

ಈ ಪ್ರಕರಣದ ಕುರಿತು ಪೊಲೀಸರು ತ್ವರಿತವಾಗಿ ತನಿಖೆ ನಡೆಸಿ, ಬೆದರಿಕೆ ಸಂದೇಶಗಳನ್ನು ಕಳುಹಿಸಿದ ವ್ಯಕ್ತಿಯ ಗುರುತು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಆರೋಪಿಯನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಇಲ್ಲವಾದಲ್ಲಿ ಬಿಜೆಪಿ ವತಿಯಿಂದ ಯಾದಗಿರಿ ಜಿಲ್ಲೆದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಪರಶುರಾಮ ಕುರಕುಂದಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆರೋಪಿಯನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಇಲ್ಲವಾದಲ್ಲಿ ಬಿಜೆಪಿ ವತಿಯಿಂದ ಜಿಲ್ಲಾದ್ಯಂತ ಉಗ್ರವಾದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News