×
Ad

ಯಾದಗಿರಿ: ಅರ್ಥಪೂರ್ಣವಾಗಿ ಕನಕದಾಸರ ಜಯಂತಿ ಆಚರಣೆಗೆ ನಿರ್ಧಾರ

Update: 2025-10-28 17:42 IST

ಯಾದಗಿರಿ: ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್, ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನವೆಂಬರ್ 8 ರಂದು ಭಕ್ತ ಶ್ರೀ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಭಕ್ತ ಶ್ರೀ ಕನಕದಾಸರ ಜಯಂತಿ ಆಚರಿಸುವ ಕುರಿತು ಅಪರ ಜಿಲ್ಲಾಧಿಕಾರಿ ರಮೇಶ್ ಕೋಲಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ನಗರದ ಕನ್ನಡ ಸಾಹಿತ್ಯ ಪರಿಷತ್ ಸಭಾಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಈ ಜಯಂತಿ ಆಯೋಜಿಸಲು,ಭಕ್ತ ಶ್ರೀ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಲು,ವೇದಿಕೆ, ಆಸನದ ವ್ಯವಸ್ಥೆ, ಶಿಷ್ಟಾಚಾರದಂತೆ ಗಣ್ಯರನ್ನು ಆಹ್ವಾನಿಸಲು ನಿರ್ಧರಿಸಲಾಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಅಪಾರ ಜಿಲ್ಲಾಧಿಕಾರಿ ರಮೇಶ ಕೋಲಾರ್ ಅವರು ಕಾರ್ಯಕ್ರಮದ ಸಂದರ್ಭದಲ್ಲಿ , ಸೂಕ್ತ ಪೋಲಿಸ್ ಬಂದೋಬಸ್ತ್, ವೇದಿಕೆ ಸಿದ್ಧತೆ ನೋಡಿಕೊಳ್ಳಲು , ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಆಮಂತ್ರಣ ಪತ್ರಿಕೆ ವಿತರಿಸುವ ವ್ಯವಸ್ಥೆಗೆ ಸೂಚಿಸಲಾಯಿತು.

ಕಾರ್ಯಕ್ರಮವನ್ನು ತಾಲೂಕ ಮಟ್ಟದಲ್ಲಿ ಶಾಲಾ, ಕಾಲೇಜು, ಗ್ರಾಮ ಪಂಚಾಯತ್, ವಿವಿಧ ಕಚೇರಿ ಗಳಲ್ಲಿ ಈ ಜಯಂತಿ ಆಚರಣೆ, ಮುಖ್ಯ ಕಾರ್ಯಕ್ರಮಕ್ಕೆ, ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಸಮಾಜದ ಮೂಲಕ ಹಮ್ಮಿಕೊಳ್ಳಲಾಗುವ ಮೆರವಣಿಗೆ ಕಾರ್ಯಕ್ರಮ ಶಾಂತಿಯುತವಾಗಿ ಕೈಗೊಳ್ಳಲು ಹಾಗೂ ಮುಂಚಿತವಾಗಿ ಜಿಲ್ಲಾಡಳಿತಕ್ಕೆ ಈ ಕುರಿತು ಮಾಹಿತಿ ನೀಡಲು ಸೂಚಿಸಿದರು. ಕನಕದಾಸರ ವೃತ್ತದ ಸ್ವಚ್ಛತೆ, ಅಲಂಕಾರ ಕುರಿತು ಕ್ರಮ ಕೈಗೊಳ್ಳಲು,ಕಲಾತಂಡಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶ್ರೀಮತಿ ಉತ್ತರಾದೇವಿ ಮಠಪತಿ,

ಮಲ್ಲಯ್ಯ ಕಸಬಿ, ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಮಲ್ಲಣ್ಣ ಐಕೂರ್, ಪ್ರಧಾನ ಕಾರ್ಯದರ್ಶಿ ಮಲ್ಲಯ್ಯ, ಕಾರ್ಯಾಧ್ಯಕ್ಷ ಹಣುಮಂತ ತೇಕರಾಳ, ತಾಲೂಕು ಪ್ರಧಾನ ಕಾರ್ಯದರ್ಶಿ ಬೀರೇಶ್ ಚಿರತೆಣ್ಣವರ, ಸಾಯಿಬಣ್ಣ ಕೆಂಗೇರಿ, ರವಿಕಡೆಚೂರ್,ಸಿದ್ದು ಪೂಜಾರಿ,ವಿಜಯ ಕರಿದಳ್ಳಿ, ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News