ಯಾದಗಿರಿ: ಬೆಂಗಳೂರು–ಮುಂಬೈ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು ನಿಲ್ದಾಣದಲ್ಲಿ ನಿಲುಗಡೆ ಕಲ್ಪಿಸುವಂತೆ ಅಂಜುಮನ್ ತಾರಕೀ ಉರ್ದು ಯಾದಗಿರಿ ಘಟಕದ ಅಧ್ಯಕ್ಷ ಡಾ. ರಫೀಕ್ ಸೌದಾಗರ್ ಆಗ್ರಹಿಸಿದ್ದಾರೆ.

ಈ ಕುರಿತು ದಕ್ಷಿಣ ಮಧ್ಯ ರೈಲ್ವೆ, ಸಿಕಂದರಾಬಾದ್‌ನ ಪ್ರಧಾನ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿರುವ ಅವರು, ಯಾದಗಿರಿ ಜಿಲ್ಲಾ ಕೇಂದ್ರವಾಗಿದ್ದು, ಕಲ್ಯಾಣ ಕರ್ನಾಟಕದ ಪ್ರಮುಖ ರೈಲು ನಿಲ್ದಾಣಗಳಲ್ಲಿ ಒಂದಾಗಿದೆ. ಜಿಲ್ಲೆಯ ಜನರು ಶಿಕ್ಷಣ, ಉದ್ಯೋಗ, ಆರೋಗ್ಯ, ವ್ಯಾಪಾರ ಸೇರಿದಂತೆ ವಿವಿಧ ಕಾರಣಗಳಿಗಾಗಿ ಬೆಂಗಳೂರು, ಮುಂಬೈ, ಪುಣೆ ಮತ್ತಿತರ ನಗರಗಳಿಗೆ ನಿರಂತರವಾಗಿ ಪ್ರಯಾಣಿಸುತ್ತಿದ್ದಾರೆ. ಹೀಗಾಗಿ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ನಿಲ್ದಾಣದಲ್ಲಿ ನಿಲುಗಡೆ ನೀಡಿದರೆ ಜಿಲ್ಲೆಯ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಇಮ್ರಾನ್ ಅಹ್ಮದ್, ಜಾಫರ್, ಇಫ್ತೆಕರ್ ಅಹಮ್ಮದ್, ಅಜ್ಜು, ಸನಾವುಲ್ಲಾ, ಸಾಜಿದ್ ಅಹಮ್ಮದ್, ಶಕೀಲ್ ಅಹಮದ್, ಲಕ್ಷ್ಮಣ, ಹಣಮಂತ ಖಾನಳ್ಳಿ ಹಾಗೂ ಮಹಮ್ಮದ್ ರಾಜಾ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor