×
Ad

ಸುರಪುರಕ್ಕೆ ಮುಕ್ತಿ ವಾಹನ ಸೌಲಭ್ಯ ಕಲ್ಪಿಸಲು ಆಗ್ರಹ

Update: 2026-06-26 19:34 IST

ಸುರಪುರ: ಪಟ್ಟಣದಲ್ಲಿ ಶವಯಾತ್ರೆಗಾಗಿ ಮುಕ್ತಿ ವಾಹನ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ನಗರಸಭೆ ನಾಮ ನಿರ್ದೇಶಿತ ಸದಸ್ಯ ಪ್ರಕಾಶ ಅಲಬನೂರ ಅವರು ಮನವಿ ಸಲ್ಲಿಸಿದರು.

ಈ ಕುರಿತು ಮಾತನಾಡಿದ ಅವರು, ಸುರಪುರ ನಗರಸಭೆಯು 31 ವಾರ್ಡುಗಳನ್ನು ಹೊಂದಿದ್ದು, ಪಟ್ಟಣದಲ್ಲಿ ಸುಮಾರು 70 ಸಾವಿರ ಜನಸಂಖ್ಯೆ ಇದೆ. ನಗರವು ಸುಮಾರು 18 ಕಿಲೋಮೀಟರ್ ವ್ಯಾಪ್ತಿಯಲ್ಲಿ ವಿಸ್ತರಿಸಿಕೊಂಡಿದ್ದು, ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಆದರೆ, ಪಟ್ಟಣದಲ್ಲಿ ಯಾರಾದರೂ ನಿಧನರಾದ ಸಂದರ್ಭದಲ್ಲಿ ಮೃತದೇಹವನ್ನು ಸ್ಮಶಾನದವರೆಗೆ ಕೊಂಡೊಯ್ಯಲು ಮುಕ್ತಿ ವಾಹನದ ಸೌಲಭ್ಯ ಇಲ್ಲದಿರುವುದರಿಂದ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದರು.

ಆದ್ದರಿಂದ ನಗರಸಭೆ ವ್ಯಾಪ್ತಿಯ ರಂಗಂಪೇಟೆ, ತಿಮ್ಮಾಪುರ, ಹಸನಾಪುರ, ದೀವಳಗುಡ್ಡ, ಸತ್ಯಂಪೇಟೆ, ಕುಂಬಾರಪೇಟೆ, ನರಸಿಂಗಪೇಟೆ ಸೇರಿದಂತೆ ವಿವಿಧ ಪ್ರದೇಶಗಳ ಜನತೆಗೆ ಅನುಕೂಲವಾಗುವಂತೆ ಮುಕ್ತಿ ವಾಹನ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.

ಈ ಸಂಬಂಧ ಜಿಲ್ಲಾಧಿಕಾರಿಗಳು, ನಗರಸಭೆಯ ಆಡಳಿತಾಧಿಕಾರಿ ಹಾಗೂ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಗಿದ್ದು, ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ನಗರಸಭೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶಾಂತಪ್ಪ ಹೊಸೂರ ಅವರ ಮೂಲಕ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ನಗರಸಭೆ ವ್ಯವಸ್ಥಾಪಕ ಯಲ್ಲಪ್ಪ ನಾಯಕ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News