×
Ad

ಹುಣಸಗಿಯಲ್ಲಿ ಜ.9ರಂದು ಪ್ರಥಮ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ

Update: 2026-01-08 20:37 IST

ಹುಣಸಗಿ: ಪಟ್ಟಣದ ಯುಕೆಪಿ (UKP) ಕ್ಯಾಂಪಿನ ನೀಲಕಂಠೇಶ್ವರ ದೇವಸ್ಥಾನದ ಆವರಣದಲ್ಲಿರುವ 'ಕೊಡೇಕಲ್ಲ ಬಸವೇಶ್ವರ ಪ್ರಧಾನ ವೇದಿಕೆ'ಯಲ್ಲಿ ಶುಕ್ರವಾರ ಹಮ್ಮಿಕೊಂಡಿರುವ ತಾಲ್ಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 5 ಸಾವಿರಕ್ಕೂ ಹೆಚ್ಚು ಸಾಹಿತ್ಯಾಸಕ್ತರು ಪಾಲ್ಗೊಳ್ಳಲಿದ್ದಾರೆ ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟಗಿರಿ ದೇಶಪಾಂಡೆ ತಿಳಿಸಿದರು.

ಶುಕ್ರವಾರ(ಜ.9) ಬೆಳಿಗ್ಗೆ ಸಮ್ಮೇಳನದ ಆವರಣದಲ್ಲಿ ರಾಷ್ಟ್ರ ಧ್ವಜಾರೋಹಣ ಹಾಗೂ ಪರಿಷತ್‌ ಧ್ವಜಾರೋಹಣದ ಬಳಿಕ ಪಟ್ಟಣದ ಮಹಾಂತಸ್ವಾಮಿ ವೃತ್ತದಿಂದ ಸಮ್ಮೇಳನಾಧ್ಯಕ್ಷರಾದ ಹಿರಿಯ ಸಾಹಿತಿ ವಿರೇಶ ಹಳ್ಳುರ ಅವರನ್ನು ಅಲಂಕೃತ ವಾಹನದಲ್ಲಿ ಕರೆದುಕೊಂಡು ಬರಲಾಗುತ್ತದೆ. ಮೆರವಣಿಗೆಯಲ್ಲಿ ಮಹಿಳಾ ಡೊಳ್ಳು ಕುಣಿತ, ಕುದುರೆ ಕುಣಿತ, ಮೂರು ಹಲಗೆ ವಾದನ ಕಲಾತಂಡಗಳು, ಲೇಜಿಮು ಕುಣಿತ ಸೇರಿದಂತೆ ಇತರ ಕಲಾತಂಡಗಳು ಪಾಲ್ಗೊಳ್ಳುತ್ತಿವೆ. ಅಲ್ಲದೇ ಮಹಿಳೆಯ ಪೂರ್ಣಕುಂಭ ಹಾಗೂ ಶಾಲಾ ಮಕ್ಕಳ ಆಕರ್ಷಕ ಮೆರವಣಿಗೆ ಇದೆ ಎಂದು ವಿವರಿಸಿದರು.

ಹುಣಸಗಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಶುಕ್ರವಾರ ಬೆಳಿಗ್ಗೆ ರಾಷ್ಟ್ರಧ್ವಜ ಹಾಗೂ ಪರಿಷತ್ ಧ್ವಜಾರೋಹಣದ ನಂತರ, ಪಟ್ಟಣದ ಮಹಾಂತಸ್ವಾಮಿ ವೃತ್ತದಿಂದ ಸಮ್ಮೇಳನಾಧ್ಯಕ್ಷರಾದ ಹಿರಿಯ ಸಾಹಿತಿ ವಿರೇಶ ಹಳ್ಳೂರ ಅವರನ್ನು ಅಲಂಕೃತ ವಾಹನದಲ್ಲಿ ಮೆರವಣಿಗೆಯ ಮೂಲಕ ಕರೆತರಲಾಗುವುದು. ಈ ಮೆರವಣಿಗೆಯಲ್ಲಿ ಮಹಿಳಾ ಡೊಳ್ಳು ಕುಣಿತ, ಕುದುರೆ ಕುಣಿತ, ಮೂರು ಹಲಗೆ ವಾದನ, ಲೇಜಿಮ್ ಸೇರಿದಂತೆ ವಿವಿಧ ಕಲಾತಂಡಗಳು ಹಾಗೂ ಶಾಲಾ ಮಕ್ಕಳ ಪೂರ್ಣಕುಂಭ ಹೊತ್ತ ಮೆರವಣಿಗೆ ಆಕರ್ಷಣೀಯವಾಗಿರಲಿದೆ. ಮೆರವಣಿಗೆಗೆ ಮಾಜಿ ಸಚಿವ ನರಸಿಂಹನಾಯಕ (ರಾಜೂಗೌಡ) ಚಾಲನೆ ನೀಡಲಿದ್ದಾರೆ.

ಸಮ್ಮೇಳನವನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಮರೇಶ ಯಾತಗಲ್ಲ ಉದ್ಘಾಟಿಸಲಿದ್ದು, ಶಾಸಕ ರಾಜಾ ವೇಣುಗೋಪಾಲ ನಾಯಕ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಸಂಸದ ಜಿ. ಕುಮಾರ ನಾಯಕ ಅವರು ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಿದ್ದಾರೆ. ಸುರಪುರ ಸಂಸ್ಥಾನದ ರಾಜಾ ಕೃಷ್ಣಪ್ಪ ನಾಯಕ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿ.ಇ. ಪಾಟೀಲ, ಚಂದ್ರಶೇಖರ ಪಾಟೀಲ, ಶಶೀಲ ನಮೋಶಿ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷ ತಿಪ್ಪಣ್ಣ ನಾಯಕ ಪಾಲ್ಗೊಳ್ಳಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಎಸ್.ಪಿ. ದಯಾನಂದ, ವಿಠ್ಠಲ ಯಾದವ ಹಾಗೂ ಪದ್ಮಶ್ರೀ ಡಾ. ಕೆ. ಪದ್ದಯ್ಯ ಆಗಮಿಸಲಿದ್ದಾರೆ.

ಮಧ್ಯಾಹ್ನ ನಡೆಯುವ ಮೊದಲ ಗೋಷ್ಠಿಯಲ್ಲಿ ನಾಗಪ್ಪ ಅಡಿಕ್ಯಾಳ ಅವರು ಸಮ್ಮೇಳನಾಧ್ಯಕ್ಷ ವಿರೇಶ ಹಳ್ಳೂರ ಅವರ 'ಬದುಕು-ಬರಹ'ದ ಕುರಿತು ಮಾತನಾಡಲಿದ್ದಾರೆ. ದಾವಣಗೆರೆ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಭೀಮಾಶಂಕರ ಜೋಶಿ ಅವರು 'ಹುಣಸಗಿ ತಾಲ್ಲೂಕಿನ ಸಾಹಿತ್ಯ ಮತ್ತು ಸಂಸ್ಕೃತಿ' ಕುರಿತು ವಿಷಯ ಮಂಡಿಸಲಿದ್ದಾರೆ. ಸಿದ್ಧರಾಮ ಹೊನಕಲ್ಲ ಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವೆಂಕಟಗಿರಿ ದೇಶಪಾಂಡೆ ವಿವರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News