ಯಾದಗಿರಿ | 23 ಲಕ್ಷ ರೂ. ಮೌಲ್ಯದ ಗಾಂಜಾ ಸಸಿಗಳ ವಶ: ಪ್ರಕರಣ ದಾಖಲು
Update: 2025-10-16 20:18 IST
ಯಾದಗಿರಿ: ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ವಂದಗನೂರು ಗ್ರಾಮದ ರೈತನ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ ಸುಮಾರು 23 ಲಕ್ಷ ರೂ. ಮೌಲ್ಯದ ಗಾಂಜಾ ಸಸಿಗಳನ್ನು ಕೆಂಭಾವಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಅಕ್ಟೋಬರ್ 14 ರಂದು ಬೆಳಗ್ಗೆ ದಾಳಿ ನಡೆಸಿದ ಪೊಲೀಸರು ಗಾಂಜಾ ಸಸಿಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.