ಗುರುಮಠಕಲ್ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದ ಬೃಹತ್ ಪ್ರತಿಭಟನೆ
ಗುರುಮಠಕಲ್: ನ್ಯಾಯಬದ್ಧ ಹಾಗೂ ಸಂವಿಧಾನಾತ್ಮಕ ಒಳಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ತಾಲೂಕಿನ ಮಾದಿಗ ಸಮಾಜದ ವಿವಿಧ ಸಂಘಟನೆಗಳ ವತಿಯಿಂದ ಮಂಗಳವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಚನ್ನಮಲ್ಲಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಾದಿಗ ಸಮುದಾಯದ ಮುಖಂಡರು ಮತ್ತು ಸದಸ್ಯರು ಸೇರಿ ಘೋಷಣೆಗಳೊಂದಿಗೆ ಜಾಥಾ ನಡೆಸಿದರು. ಬಳಿಕ ಬಸವೇಶ್ವರ ವೃತ್ತದ ಬಳಿ ರಸ್ತೆ ಹಾಗೂ ಹೈದರಾಬಾದ್ ಮುಖ್ಯ ರಸ್ತೆಯನ್ನು ಕೆಲಕಾಲ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಕೆ. ಬಿ. ವಾಸು, ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವ ಬಗ್ಗೆ ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ದೇವದಾಸ್ ಮಾತನಾಡಿ, ರಾಜ್ಯ ಸರ್ಕಾರ 56,432 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿರುವುದು ಸ್ವಾಗತಾರ್ಹ. ಆದರೆ ಪರಿಶಿಷ್ಟ ಜಾತಿಯ ಒಳಮೀಸಲಾತಿ ಮತ್ತು ಬಡ್ತಿ ಮೀಸಲಾತಿಯನ್ನು ಸರ್ಕಾರಿ ನೌಕರರಿಗೂ ಅನ್ವಯಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮೂವತ್ತು ವರ್ಷಗಳಿಂದ ಒಳಮೀಸಲಾತಿಗಾಗಿ ಹೋರಾಟ ನಡೆಯುತ್ತಿದ್ದು, ಸರ್ಕಾರ ನಮ್ಮ ಸಮುದಾಯದ ಬೇಡಿಕೆಗಳನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿದರು. ಒಳಮೀಸಲಾತಿ ಜಾರಿಗೆ ತರದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಹಿರಿಯ ಮುಖಂಡರುಗಳು ಆಶಾನ್ನ ಬುದ್ಧ ಪುರಸಭೆ ಮಾಜಿ ಸದಸ್ಯರು. ಭೀಮಶಪ್ಪ ಗುಡಸೆ ಪುರಸಭೆ ಮಾಜಿ ಅಧ್ಯಕ್ಷ ಹನುಮಂತು ಶನಿವಾರಮ್ ಅಶೋಕ್ ಶನಿವಾರಮ್ kdss ಅಧ್ಯಕ್ಷ. ರವಿ ಬುರನೋಳ್ ಮಾದಿಗ ದಂಡೋರ ತಾಲೂಕು ಅಧ್ಯಕ್ಷ. ಭೀಮಶಪ್ಪ ಕೆಳಮನಿ ಮಾಣಿಕ್ ಮುಕ್ಕಿಡಿ ಡಾ. ಕೃಷ್ಣ ಚೇಪೆಟ್ಲಾ ಕಿಷ್ಟಪ್ಪ ಸೈಪೋಳ ಮಲ್ಲಿಕಾರ್ಜುನ ಸೈದಪೋಳ ಕರಣಪ್ಪ ಎಂ ಟಿ ಪಲ್ಲಿ ನಾಗೇಶ್ ಚಂಡರಿಕಿ ಗುಂಡೆಸ ಗಜಾರಕೋಟ ಇನ್ನು ಅನೇಕ ಮಾದಿಗ ಸಮಾಜದ ಮುಖಂಡರು ಮತ್ತು ಹೋರಾಟಗಾರರು ಭಾಗಿಯಾಗಿದ್ದರು