ಹುಣಸಗಿ | ಚಂದ್ರಶೇಖರ ದಂಡಿನಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಖೇಮು ಎಚ್.ರಾಠೋಡ ಒತ್ತಾಯ

Update: 2026-08-11 19:54 IST

ಹುಣಸಗಿ: ಹುಣಸಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಎನ್. ದಂಡಿನ ಅವರನ್ನು ಯಾದಗಿರಿ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ಕಾಂಗ್ರೆಸ್ ಮುಖಂಡ ಖೇಮು ಎಚ್. ರಾಠೋಡ ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದಾರೆ.

ಚಂದ್ರಶೇಖರ ದಂಡಿನ ಅವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ ಕಾರ್ಯಕರ್ತರನ್ನು ಸಂಘಟಿಸುವುದು, ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕದಲ್ಲಿರುವುದು ಸೇರಿದಂತೆ ಪಕ್ಷದ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಯಾದಗಿರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಸಂಘಟನಾತ್ಮಕವಾಗಿ ಬಲಪಡಿಸಲು ಸ್ಥಳೀಯ ಕಾರ್ಯಕರ್ತರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಹಾಗೂ ಸಂಘಟನಾ ಅನುಭವವಿರುವ ಯುವ ನಾಯಕತ್ವಕ್ಕೆ ಆದ್ಯತೆ ನೀಡಬೇಕು. ಈ ಹಿನ್ನೆಲೆಯಲ್ಲಿ ಚಂದ್ರಶೇಖರ ದಂಡಿನ ಅವರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಿದರೆ ಪಕ್ಷದ ಸಂಘಟನೆಗೆ ಹೊಸ ಚೈತನ್ಯ ದೊರೆಯಲಿದೆ ಎಂದು ಖೇಮು ರಾಠೋಡ ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ಜಿಲ್ಲೆಯ ರಾಜಕೀಯ ಪರಿಸ್ಥಿತಿ, ಸಂಘಟನಾ ಸಾಮರ್ಥ್ಯ ಹಾಗೂ ಕಾರ್ಯಕರ್ತರೊಂದಿಗೆ ಹೊಂದಿರುವ ನಿಕಟ ಸಂಪರ್ಕವನ್ನು ಪರಿಗಣಿಸಿ ಚಂದ್ರಶೇಖರ ದಂಡಿನ ಅವರ ಹೆಸರನ್ನು ವರಿಷ್ಠರು ಪರಿಗಣಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News