ಹುಣಸಗಿ | ಸುಗಮ ಸಂಚಾರಕ್ಕೆ ಅತಿಕ್ರಮಣ ರಸ್ತೆ ತೆರವು

Update: 2026-08-19 18:53 IST

ಹುಣಸಗಿ: ಪಟ್ಟಣದ ಮಹಾಂತಸ್ವಾಮಿ ವೃತ್ತದಿಂದ ಕೆಂಭಾವಿ ಮುಖ್ಯ ರಸ್ತೆಯ ಹಳ್ಳದವರೆಗೆ ರಸ್ತೆ ಬದಿಯಲ್ಲಿ ನಿರ್ಮಿಸಲಾಗಿದ್ದ ಅಂಗಡಿ-ಮುಂಗಟ್ಟುಗಳು ಹಾಗೂ ಇತರೆ ಅತಿಕ್ರಮಣಗಳನ್ನು ಪಟ್ಟಣ ಪಂಚಾಯಿತಿ ಅಧಿಕಾರಿಗಳು ಬುಧವಾರ ಜೆಸಿಬಿ ಮೂಲಕ ತೆರವುಗೊಳಿಸಿದರು.

ಮುಖ್ಯ ರಸ್ತೆಯ ಎರಡೂ ಬದಿಗಳಲ್ಲಿ ಕೆಲವರು ಅಂಗಡಿ ಹಾಗೂ ಮುಂಗಟ್ಟುಗಳನ್ನು ನಿರ್ಮಿಸಿಕೊಂಡಿದ್ದರಿಂದ ವಾಹನಗಳು ಮತ್ತು ಪಾದಚಾರಿಗಳ ಸಂಚಾರಕ್ಕೆ ತೊಂದರೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ರಸ್ತೆ ಬದಿಯ ತಾತ್ಕಾಲಿಕ ಕಟ್ಟಡಗಳು ಸೇರಿದಂತೆ ಅತಿಕ್ರಮಣಗಳನ್ನು ತೆರವುಗೊಳಿಸಿದರು.

ಸುಗಮ ಸಂಚಾರಕ್ಕೆ ಕ್ರಮ:

ಈ ಕುರಿತು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅರುಣಕುಮಾರ ಚವ್ಹಾಣ ಮಾತನಾಡಿ, ರಸ್ತೆ ಅತಿಕ್ರಮಣದಿಂದ ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ತೊಂದರೆಯಾಗುತ್ತಿತ್ತು. ಸಾರ್ವಜನಿಕರ ಸುಗಮ ಸಂಚಾರ ಮತ್ತು ರಸ್ತೆ ಸುರಕ್ಷತೆಯ ದೃಷ್ಟಿಯಿಂದ ಅತಿಕ್ರಮಣ ತೆರವುಗೊಳಿಸಲಾಗಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಮತ್ತೆ ರಸ್ತೆ ಅತಿಕ್ರಮಿಸದಂತೆ ವ್ಯಾಪಾರಸ್ಥರು ಸಹಕರಿಸಬೇಕು. ಅತಿಕ್ರಮಣ ಕಂಡುಬಂದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಕಾರ್ಯಾಚರಣೆ ವೇಳೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News