ಹುಣಸಗಿ: ಗ್ರಾಮೀಣ ಜನರು ಸ್ವಾವಲಂಬಿಗಳಾಗಿ ಜೀವನ ನಿರ್ವಹಣೆ ಮಾಡಲು ಸಹಕಾರಿ ಸಂಘಗಳ ಪಾತ್ರ ಪ್ರಮುಖವಾಗಿದ್ದು, ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸಹಕಾರಿ ಸಂಘಗಳು ಆರಂಭವಾಗಬೇಕು ಎಂದು ಕೆವೈಡಿಸಿ ಬ್ಯಾಂಕ್ ನಿರ್ದೇಶಕ ಸುರೇಶ ಸಜ್ಜನ್ ಹೇಳಿದರು.

ಪಟ್ಟಣದ ಯುಕೆಪಿ ಕ್ಯಾಂಪಿನ ನೀಲಕಂಠೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಸಹಕಾರಿ ಸಂಘಗಳು ರಚನೆಯಾದರೆ ಸರ್ಕಾರದಿಂದ ದೊರೆಯುವ ವಿವಿಧ ಸೌಲಭ್ಯ ಹಾಗೂ ಸಹಾಯ-ಸಹಕಾರವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ದಂಡಿನ್ ಮಾತನಾಡಿ, ಯಾದಗಿರಿ ಜಿಲ್ಲೆಯು ಅತ್ಯಂತ ಸಂಪದ್ಭರಿತ ಜಿಲ್ಲೆಯಾಗಿದೆ. ಇಲ್ಲಿನ ನೆಲ ಮತ್ತು ಜಲ ಸಂಪತ್ತು ವಿವಿಧ ಬೆಳೆಗಳನ್ನು ಬೆಳೆಯಲು ಪೂರಕವಾಗಿದ್ದು, ಈ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸಹಕಾರಿ ತತ್ವಗಳ ಅಡಿಯಲ್ಲಿ ಸಶಕ್ತರಾಗಬೇಕು ಎಂದು ಹೇಳಿದರು.

ಕೆಎಂಎಫ್ ನಿರ್ದೇಶಕ ಹನುಮಂತ್ರಾಯಗೌಡ ಮಾಲಿಪಾಟೀಲ ಕಕ್ಕೇರಾ ಮಾತನಾಡಿ, ಮುಂದಿನ ದಿನಗಳಲ್ಲಿ ಹುಣಸಗಿ ಹಾಗೂ ಸುರಪುರ ತಾಲೂಕುಗಳಲ್ಲಿ ಹಾಲು ಉತ್ಪಾದಕರ ಸಂಘಗಳು ಹೆಚ್ಚು ಸಕ್ರಿಯವಾಗಿ ಕಾರ್ಯನಿರ್ವಹಿಸಿದರೆ, ರೈತರಿಗೆ ಅನೇಕ ಸೌಲಭ್ಯಗಳು ದೊರೆಯಲಿವೆ ಎಂದು ತಿಳಿಸಿದರು.

ಸಹಕಾರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಎಂ. ನಾರಾಯಣ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಹಿರಿಯರಾದ ಬಸವರಾಜ ಜಮಾದಾರ ಖಾನ್, ಬಾಪುಗೌಡ ಪಾಟೀಲ, ಬಸವರಾಜ ಸಜ್ಜನ್, ಪ್ರಕಾಶ ಅಂಗಡಿ, ಬಸವರಾಜ ಮೇಲಿನಮನಿ, ರಂಗಪ್ಪ ಡಂಗಿ, ಎಂ.ಆರ್. ಖಾಜಿ, ರಾಚಪ್ಪ ಪಟ್ಟಣಶೆಟ್ಟಿ, ಶಾಂತರಡ್ಡಿ ಚೌದ್ರಿ ಹಾಗೂ ಕಾರ್ಯನಿರ್ವಾಹಣಾಧಿಕಾರಿ ಅನ್ನಪೂರ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ

ಯಾದಗಿರಿ ಜಿಲ್ಲಾ ವರದಿಗಾರರು

ಶರಬು ಬಿ.ನಾಟೇಕಾರ್ ಅವರು 2018ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಎಂ.ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಎಂಟು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿ ದಿನಪತ್ರಿಕೆಯ ಯಾದಗಿರಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ