ಶಹಾಪುರ: ನಗರದ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಎನ್‌ಜಿಒ ಕಾಲೋನಿಯಲ್ಲಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಹಾಗೂ ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಭವನದ ಉದ್ಘಾಟನಾ ಸಮಾರಂಭ ನವೆಂಬರ್ 30ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಹಾಗೂ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ವಿಶ್ವನಾಥರಡ್ಡಿ ದರ್ಶನಾಪೂರ ತಿಳಿಸಿದರು.

ನಗರದ ಎನ್‌ಜಿಒ ಕಾಲೋನಿಯ ಸರ್ಕಾರಿ ನೌಕರರ ಭವನದಲ್ಲಿ ಉದ್ಘಾಟನಾ ಸಮಾರಂಭದ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು. ತಮ್ಮ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮವನ್ನು ಶಾಸಕ ಶರಣಬಸಪ್ಪಗೌಡ ದರ್ಶನಾಪೂರ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಉಪಾಧ್ಯಕ್ಷ ಬಿ.ಕೆ. ಶಿವಕುಮಾರ್, ಸಹಕಾರ ಇಲಾಖೆಯ ಉಪನಿರ್ದೇಶಕ ಪವನಕುಮಾರ್ ರಾಠೋಡ್, ಕಲಬುರಗಿ-ಯಾದಗಿರಿ ಸಹಕಾರ ಬ್ಯಾಂಕ್ ನಿರ್ದೇಶಕ ಸುರೇಶ್ ಆರ್. ಸಜ್ಜನ್, ಯೂನಿಯನ್ ಉಪಾಧ್ಯಕ್ಷ ಎಂ. ನಾರಾಯಣ, ಬಾಪುಗೌಡ ಅಸಂತಾಪೂರ ಹಾಗೂ ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್.ಸಿ. ಪಾಟೀಲ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಸರ್ಕಾರಿ ನೌಕರರ ಸಂಘ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಕೂಡ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದ ಯಶಸ್ಸಿಗಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ರಾಮಣ್ಣಗೌಡ ಖಾನಾಪುರ, ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ಶಾಂತರಡ್ಡಿ ತುಂಬಗಿ, ರವಿ ಪತ್ತರ, ಮಲ್ಲಿಕಾರ್ಜುನ ಸಜ್ಜನ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದು, ಉದ್ಘಾಟನಾ ಸಮಾರಂಭದ ಸಿದ್ಧತೆಗಳ ಕುರಿತು ಚರ್ಚಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ

ಯಾದಗಿರಿ ಜಿಲ್ಲಾ ವರದಿಗಾರರು

ಶರಬು ಬಿ.ನಾಟೇಕಾರ್ ಅವರು 2018ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಎಂ.ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಎಂಟು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿ ದಿನಪತ್ರಿಕೆಯ ಯಾದಗಿರಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ