ಕೆಂಭಾವಿ: ಸುರಪುರ ತಾಲ್ಲೂಕು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಖಜಾಂಚಿಯಾಗಿ ಅವಿರೋಧವಾಗಿ ಆಯ್ಕೆಯಾದ ಮಲ್ಲಾ (ಬಿ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಆನಂದ್ ಅವರನ್ನು ಗ್ರಾಮದ ಯುವ ಮುಖಂಡರು ಹಾಗೂ ಗಣ್ಯರು ಶಾಲು ಹೊದಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಯುವ ಮುಖಂಡ ಮಂಜು ಕೊಂಬಿನ ಮಾತನಾಡಿ, ಶಿಕ್ಷಕ ಆನಂದ್ ಅವರು ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಶಾಲಾ ಮಕ್ಕಳ ಶೈಕ್ಷಣಿಕ ಪ್ರಗತಿಯೊಂದಿಗೆ ಸಮುದಾಯದೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅವರ ಪ್ರಾಮಾಣಿಕ ಕಾರ್ಯವೈಖರಿಯನ್ನು ಗುರುತಿಸಿ ತಾಲ್ಲೂಕು ಮಟ್ಟದ ಶಿಕ್ಷಕರ ಸಂಘದ ಖಜಾಂಚಿಯಾಗಿ ಅವಿರೋಧವಾಗಿ ಆಯ್ಕೆ ಮಾಡಿರುವುದು ಇಡೀ ಗ್ರಾಮಕ್ಕೆ ಹೆಮ್ಮೆಯ ಸಂಗತಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಶಿಕ್ಷಕ ಆನಂದ್, ತಮ್ಮ ಮೇಲೆ ವಿಶ್ವಾಸವಿಟ್ಟು ಜವಾಬ್ದಾರಿ ನೀಡಿದ ಸಂಘಟನೆಯ ಪದಾಧಿಕಾರಿಗಳಿಗೆ ಹಾಗೂ ಪ್ರೀತಿಯಿಂದ ಸನ್ಮಾನಿಸಿದ ಗ್ರಾಮದ ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದರು. ಶಿಕ್ಷಕರ ಹಿತರಕ್ಷಣೆ ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಗುರು ಬಿ.ಆರ್. ಗೌಂಡಿ, ಯುವ ಮುಖಂಡರಾದ ಮರೇಪ್ಪ ಗೌಂಡಿ, ಮಂಜುನಾಥ ಗೋಡೇಕರ್, ರವಿ ದೋರನಹಳ್ಳಿ, ಪರಶುರಾಮ ದೊರೆ, ಭೀಮರಾಯ ಪೂಜಾರಿ, ರಫೀಕ್ ಮುಜಾವರ್, ಸಂಗಪ್ಪ ಬಡಿಗೇರ್, ಬೀರಲಿಂಗ ಪೂಜಾರಿ ಸೇರಿದಂತೆ ಶಾಲಾ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor