×
Ad

ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಸಚಿವ ಸತೀಶ್‌ ಜಾರಕಿಹೊಳಿಗೆ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಮನವಿ

Update: 2025-08-24 17:37 IST

ಯಾದಗಿರಿ: ಯಾದಗಿರಿ ಮತಕ್ಷೇತ್ರದಲ್ಲಿನ ಎನ್‌ಜಿಓ ವಸತಿ ಗೃಹಗಳು, ಪ್ರವಾಸಿ ಮಂದಿರ ಮತ್ತು ಭೀಮಾ ಸೇತುವೆ ದುರಸ್ತಿ ಮತ್ತು ನಿರ್ಮಾಣ ಕಾಮಗಾರಿಗಳಿಗೆ ಅನುಮೊದನೆ ನೀಡಿ ಅನುದಾನ ಬಿಡುಗಡೆ ಮಾಡಬೇಕೆಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಅವರು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.

ಇಲ್ಲಿನ ಅತಿಥಿ ಗೃಹದಲ್ಲಿ ಸಚಿವರನ್ನು ಭೇಟಿ ಮಾಡಿದ ಅವರು, ತಮ್ಮ ಮತಕ್ಷೇತ್ರದ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಸರಕಾರಿ ವಸತಿ ಗೃಹಗಳು ಐವತ್ತು ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದು, ಅವುಗಳಲ್ಲಿ 30 ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿದ್ದು, ಹೊಸ ಕಟ್ಟಡಗಳ ನಿರ್ಮಾಣಕ್ಕೆ ಅನುದಾನ ನೀಡಬೇಕೆಂದು ಮನವಿಯಲ್ಲಿ ಕೊರಿದ್ದಾರೆ.

ವಿವಿಐಪಿ ಪ್ರವಾಸ ಮಂದಿರ, ಭೀಮಾ ಸೇತುವೆ ದುರಸ್ತಿ ಹಾಗೂ ಹೊಸ ಸೇತುವೆ ನಿರ್ಮಾಣಕ್ಕಾಗಿ ಈಗಾಗಲೇ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಎಲ್ಲಾ ಕಾಮಗಾರಿಗಳಿಗೆ ಅನುಮೊದನೆ ನೀಡಿ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News