×
Ad

ಸಮರ್ಪಕ ರಸಗೊಬ್ಬರ ಪೂರೈಕೆಗೆ ಸಚಿವ ಜೆಪಿ ನಡ್ಡಾ ಜೊತೆ ಸಂಸದ ಕುಮಾರ ನಾಯಕ ಚರ್ಚೆ

Update: 2025-07-31 21:52 IST

ಯಾದಗಿರಿ: ರಾಜ್ಯದಾದ್ಯಂತ ಉತ್ತಮ ಮಳೆಯಾಗಿದ್ದರಿಂದ ಮುಂಗಾರು ಕೃಷಿ‌ ಚಟುವಟಿಕೆಗಳು‌ ಚುರುಕುಗೊಂಡಿವೆ. ರೈತರ ಬೆಳೆಗಳಿಗೆ ಅನುಗುಣವಾಗಿ ರೈತರ ಬೇಡಿಕೆಯಂತೆ ರಸಗೊಬ್ಬರ ಪೂರೈಕೆ ಮಾಡಬೇಕೆಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಇಲಾಖೆ ಸಚಿವ ಜೆ.ಪಿ.ನಡ್ಡಾ ಅವರೊಂದಿಗೆ ರಾಯಚೂರು ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದರಾದ ಜಿ.ಕುಮಾರ ನಾಯಕ ಅವರು ಚರ್ಚಿಸಿದರು.

ನವದೆಹಲಿಯ ಕೇಂದ್ರ ಸಚಿವರ ಕಾರ್ಯಾಲಯದಲ್ಲಿ ಭೇಟಿ ಮಾಡಿ ರಾಜ್ಯದಲ್ಲಿ 1.65 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆ ಕುರಿತು ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ. ರೈತರ ಬೇಡಿಕೆ ಹೆಚ್ಚಿರುವುದರಿಂದ ಶೀಘ್ರ ಹೆಚ್ಚುವರಿ ರಸಗೊಬ್ಬರ ಹಂಚಿಕೆ ಮಾಡುವಂತೆ ಮಾನವಿ ಮಾಡಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಠಗಳ ಬಗ್ಗೆ ಸಚಿವರ ಗಮನಕ್ಕೆ ತಂದರು.

ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಎಲ್ಲೆಡೆ ಕೃಷಿ ಚಟುವಟಿಕೆ ಬಿರುಸುಗೊಂಡಿದೆ. ಹಾಗಾಗಿ ರಸಗೊಬ್ಬರಕ್ಕೆ ರೈತರಿಂದ ಹೆಚ್ಚಿನ ಬೇಡಿಕೆಯಿದೆ. ರೈತರ ಬೇಡಿಕೆ ಸಮಯದಲ್ಲಿ ರಸಗೊಬ್ಬರ ಪೂರೈಸದಿದ್ದರೆ ರೈತರು ಸಂಕಷ್ಠ ಎದುರಿಸಲಿದ್ದಾರೆ. ನಮಗೆಲ್ಲ ತುತ್ತು ಅನ್ನ ನೀಡುವ ದೇಶದ ಬೆನ್ನೆಲುಬಾದ ರೈತರನ್ನು ಸಂರಕ್ಷಿಸಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News