ಯಾದಗಿರಿ ಜಿಲ್ಲೆಯಲ್ಲಿ ಡೈರಿ ನಿರ್ಮಾಣಕ್ಕೆ ಸಚಿವರಿಗೆ ಕರವೇ ಜಿಲ್ಲಾಧ್ಯಕ್ಷ ನಾಗಪ್ಪ ಬಿ ಹೊನಗೇರಾ ಮನವಿ
ಯಾದಗಿರಿ: ಜಿಲ್ಲೆಯಲ್ಲಿ ಹಾಲಿನ ಡೈರಿ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಪಶು ಸಂಗೋಪನಾ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಬೆಂಗಳೂರಿನ ವಿಕಾಸಸೌಧದಲ್ಲಿ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ ಅವರಿಗೆ ಭೇಟಿ ಮಾಡಿದ ಕನ್ನಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ನಾಗಪ್ಪ ಬಿ. ಹೊನಗೇರಾ, ಮನವಿ ಸಲ್ಲಿಸಿ ಮಾತನಾಡಿ, ಜಿಲ್ಲೆಯಾಗಿ 15 ವರ್ಷಗಳೇ ಕಳೆದರೂ ಇದುವರೆಗೆ ಡೈರಿ ನಿರ್ಮಾಣಕ್ಕೆ ಯಾರು ಕ್ರಮ ವಹಿಸಿಲ್ಲ. ಮೇಲಾಗಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಬಹಳಷ್ಟು ರೈತರುಗಳು ಹೆಚ್ಚಿನ ಸಂಖ್ಯೆಯಲ್ಲಿ ಹಸು, ಎಮ್ಮೆ ಸಾಕಾಣಿಕೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು, ಸದರಿ ಜಿಲ್ಲೆಯಲ್ಲಿ ಹಾಲಿನ ಡೈರಿ ಇಲ್ಲದ ಕಾರಣ ಹೋಟೆಲ್ ಹಾಗೂ ಮನೆ-ಮನೆಗೆ ತಿರುಗಿ ಹಾಲು ಮಾರಾಟ ಮಾಡುವ ಪರಿಸ್ಥಿತಿ ಬಂದಿರುತ್ತದೆ. ಆದ್ದರಿಂದ ಸದರಿಯವರಗಳಿಗೆ ತುಂಬಾ ಕಷ್ಟಕರವಾಗಿರುತ್ತದೆ. ಆದ್ದರಿಂದ ತಾವುಗಳು ಯಾದಗಿರಿ ಜಿಲ್ಲೆಯಲ್ಲಿ ಹಸು, ಎಮ್ಮೆ ಸಾಕಾಣಿಕೆ ಮಾಡಿಕೊಂಡು ಬರುತ್ತಿರುವವರಿಗೆ ಹಾಲನ್ನು ಮಾರಾಟ ಮಾಡಲು ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಹಾಲಿನ ಡೈರಿ ನಿರ್ಮಾಣ ಮಾಡಿಕೊಡಬೇಕೆಂದು ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಸಚಿವರು ಸೂಕ್ತ ಕ್ರಮದ ಭರವಸೆ ನೀಡಿದರು.