ಯಾದಗಿರಿಯಲ್ಲಿ ಕನ್ನಡ ರಕ್ಷಣಾ ವೇದಿಕೆಯ ಹೊಸ ಪದಾಧಿಕಾರಿಗಳ ನೇಮಕ
ಯಾದಗಿರಿ : ಕನ್ನಡ ರಕ್ಷಣಾ ವೇದಿಕೆಯ ಯಾದಗಿರಿ ಜಿಲ್ಲಾ ಘಟಕದಲ್ಲಿ ವಿವಿಧ ಹುದ್ದೆಗಳಿಗೆ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಸಂಘಟನೆಯ ಬಲವರ್ಧನೆ ಹಾಗೂ ಕಾರ್ಯಚಟುವಟಿಕೆಗಳಿಗೆ ನವಚೈತನ್ಯ ತುಂಬುವ ಉದ್ದೇಶದಿಂದ ಜಿಲ್ಲಾಧ್ಯಕ್ಷ ನಾಗಪ್ಪ ಹೊನಗೇರಾ ಅವರು ಅಧಿಕೃತ ನೇಮಕಾತಿ ಆದೇಶವನ್ನು ಹೊರಡಿಸಿದ್ದಾರೆ.
ಜಿಲ್ಲಾ ಸಹ ಕಾರ್ಯದರ್ಶಿಯಾಗಿ ನಾಗಪ್ಪ, ಜಿಲ್ಲಾ ಗೌರವಾಧ್ಯಕ್ಷರಾಗಿ ಚನ್ನಾರೆಡ್ಡಿ ನಾಯಕ, ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷರಾಗಿ ಅನಿಲ್ ಕುಮಾರ, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಸುರೇಶ, ಸಂಘಟನಾ ಕಾರ್ಯದರ್ಶಿಯಾಗಿ ರಾಮಕೃಷ್ಣ, ಜಿಲ್ಲಾ ಸಂಚಾಲಕರಾಗಿ ಶರಣಪ್ಪ, ಜಿಲ್ಲಾ ವಕ್ತಾರರಾಗಿ ಮಾನಯ್ಯ ಗಾಳೆನೋರ, ಜಿಲ್ಲಾ ಸಹ ಕಾರ್ಯದರ್ಶಿಯಾಗಿ ನಾಗೇಶ, ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಚಂದ್ರಶೇಖರ ಎನ್. ವಗ್ಗನ್ ಹಾಗೂ ಜಿಲ್ಲಾ ಸಂಚಾಲಕರಾಗಿ ರಮೇಶ್ ಅವರನ್ನು ನೇಮಕ ಮಾಡಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ನಾಗಪ್ಪ ಹೊನಗೇರಾ ಅವರು,“ಹೊಸ ಪದಾಧಿಕಾರಿಗಳು ತಕ್ಷಣವೇ ತಮ್ಮ ತಮ್ಮ ಹುದ್ದೆಗಳ ಜವಾಬ್ದಾರಿ ವಹಿಸಿಕೊಂಡು, ಯಾದಗಿರಿ ಜಿಲ್ಲೆಯಲ್ಲಿ ಕನ್ನಡ ರಕ್ಷಣಾ ವೇದಿಕೆಯ ಧ್ಯೇಯೋದ್ದೇಶಗಳನ್ನು ಯಶಸ್ವಿಯಾಗಿ ಈಡೇರಿಸಲು ಶ್ರಮಿಸಬೇಕು ಎಂದು ಹೇಳಿದರು.
ಸಂಘಟನೆಯ ಸಿದ್ಧಾಂತಗಳಿಗೆ ಬದ್ಧರಾಗಿ ನಾಡು–ನುಡಿ–ನೆಲ–ಜಲದ ರಕ್ಷಣೆಗೆ ಕಾರ್ಯನಿರ್ವಹಿಸಬೇಕು. ಯುವಕರ ಸಕ್ರಿಯ ಭಾಗವಹಿಸುವಿಕೆಯಿಂದ ಕರವೇ ಚಟುವಟಿಕೆಗಳು ಜಿಲ್ಲಾದ್ಯಂತ ಇನ್ನಷ್ಟು ಬಲ ಪಡೆಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.