×
Ad

ಅಕ್ಕಿ ಕಳ್ಳತನ ಪ್ರಕರಣ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ

Update: 2024-07-17 17:03 IST

Photo: facebook

ಶಹಾಪುರ : ಇಲ್ಲಿನ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಅಕ್ಕಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಸಂಬಂಧ ಚಿತ್ತಾಪುರದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ಶಹಾಪುರ ಠಾಣೆಯ ಪೊಲೀಸರು ಕಲಬುರಗಿಯಲ್ಲಿ ಬಂಧಿಸಿರುವುದಾಗಿ ವರದಿಯಾಗಿದೆ.

ಸಹಕಾರ ಸಂಘದ 2.6 ಕೋಟಿ ಮೌಲ್ಯದ 6,077 ಕ್ವಿಂಟಲ್ ಪಡಿತರ ಅಕ್ಕಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರಪುರ ಡಿವೈಎಸ್ಪಿ ಜಾವೇದ್‌ ಇನಾಂದಾರ್‌ ತನಿಖೆ ನಡೆಸುತ್ತಿದ್ದರು. ಅಲ್ಲದೆ ಬಂಧಿತ ಆರೋಪಿಗಳು, ರಾಜು ರಾಠೋಡ ಹಾಗೂ ಮಣಿಕಂಠ ರಾಠೋಡ್ ಅವರಿಗೆ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಹೇಳಿಕೆಯಲ್ಲಿ ತಿಳಿಸಿದ್ದರು ಎನ್ನಲಾಗಿದೆ. ಹೀಗಾಗಿ ಮಣಿಕಂಠ ರಾಠೋಡ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News