ಯಾದಗಿರಿ | ಕಾಲುವೆಯಲ್ಲಿ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು
Update: 2025-05-22 15:28 IST
ಸಾಂದರ್ಭಿಕ ಚಿತ್ರ
ಹುಣಸಗಿ: ಕೃಷ್ಣಾ ಎಡದಂಡೆ ಕಾಲುವೆಯಲ್ಲಿ ಈಜಲು ಹೋದ ಯುವಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ನಡೆದಿದೆ.
ಅಗತೀರ್ಥ ಗ್ರಾಮದ ವೀರೇಶ್ ಸೋಮಯ್ಯ ಹಿರೇಮಠ(20) ಮೃತ ಯುವಕ. ಬುಧವಾರ ಮಧ್ಯಾಹ್ನ ಕಾಲುವೆಯಲ್ಲಿ ಈಜಾಡಲು ಹೋದಾಗ ನೀರುಪಾಲಾಗಿ ನಾಪತ್ತೆಯಾಗಿದ್ದರು. ಸ್ಥಳಕ್ಕೆ ಆಗಮಿಸಿದ ಸುರಪುರದ ಅಗ್ನಿ ಶಾಮಕ ದಳದ ಸಿಬ್ಬಂದಿ ಸಂಜೆವರೆಗೂ ಶೋಧ ಕಾರ್ಯಾಚರಣೆ ನಡೆಸಿದರು ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಅಗ್ನಿ ಗ್ರಾಮದ ಸಮೀಪ ವೀರೇಶ್ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.