ಈಶಾನ್ಯ ಶಿಕ್ಷಕರ ಮತ ಕ್ಷೇತ್ರದ ಮತದಾರರ ಹೆಸರು ನೋಂದಣಿಗೆ ನ.6 ಕೊನೆ ದಿನ : ತಹಶೀಲ್ದಾರ್ ಹುಸೇನಸಾಬ್
ಸುರಪುರ: ಈಶಾನ್ಯ ಶಿಕ್ಷಕರ ಮತ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಣಿಗೆ ನವೆಂಬರ್ 6 ಕೊನೆಯ ದಿನಾಂಕವಾಗಿದೆ ಎಂದು ಸಹಾಯಕ ಮತದಾರರ ನೊಂದಣಾಧಿಕಾರಿ ಮತ್ತು ತಹಶೀಲ್ದಾರ್ ಹುಸೇನಸಾಬ್ ಎ.ಸರಕಾವಸ್ ಹೇಳಿದರು.
ತಹಶೀಲ್ದಾರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹುಸೇನಸಾಬ್, ಈಶಾನ್ಯ ಮತಕ್ಷೇತ್ರದ ಅವಧಿ ನವೆಂಬರ್ 2026ಕ್ಕೆ ಪೂರ್ಣಗೊಳ್ಳಲಿದ್ದು ಹೊಸ ಮತದಾರರ ಪಟ್ಟಿ ತಯಾರಿಸಬೇಕಾಗಿರುತ್ತದೆ. ಪ್ರೌಢಶಾಲೆ ಕಡಿಮೆ ಇಲ್ಲದ ಅಥವಾ ಅದಕ್ಕಿಂತ ಮೇಲಿನ ಹಂತದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ ಮೂರು ವರ್ಷ ಬೋಧಕರಾಗಿ ಬೋಧನಾ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಮತ್ತು ಈಶಾನ್ಯ ಶಿಕ್ಷಕರ ಕ್ಷೇತ್ರದ 7 ಜಿಲ್ಲೆಗಳ ವ್ಯಾಪ್ತಿಯಲ್ಲಿ ಮತದಾರರಾಗಿರುವ ಅರ್ಹವಿರುವ ಶಿಕ್ಷಕರು ಅನುಬಂಧ-2 ದೃಢೀಕರಣ ಪತ್ರದ ಜೊತೆ ನಮೂನೆ-19ರಲ್ಲಿ ಅರ್ಜಿ ಸಲ್ಲಿಸತಕ್ಕದ್ದು ಕರಡು ಮತದಾರರ ಪಟ್ಟಿ ನ25 ರಂದು ಪ್ರಕಟಿಸಲಾಗುವುದು ಡಿ.10 ವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ. ಡಿ30 ರಂದು ಅಂತಿಕಪಟ್ಟಿ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.
ಮತದಾರರ ಪಟ್ಟಿ ನೊಂದಣಿಗೆ ತಾಲೂಕಿನ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಕಾರ್ಯಕ್ರಮ ಕೈಗೊಳ್ಳಲಾಗುವುದು ತಾಪಂ ಇಓ ಅಧ್ಯಕ್ಷತೆಯ ಸ್ವೀಪ್ ಕಮಿಟಿ ಜಾಗೃತಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಅವರು ಹೇಳಿದರು.
ಈ ವೇಳೆ ತಾಲೂಕು ಪಂಚಾಯತಿ ಇಓ ಬಸವರಾಜ ಸಜ್ಜನ್, ಬಿಇಓ ಯಲ್ಲಪ್ಪ ಕಾಡ್ಲೂರ, ಶಿಕ್ಷಣ ಸಂಯೋಜಕ ಶರಣಬಸವ ಗಚ್ಚಿನಮನಿ ಉಪಸ್ಥಿತರಿದ್ದರು.