ಯಾದಗಿರಿ: ಕಳಪೆ ಮಟ್ಟದ ಜೆಜಿಎಂ ಕಾಮಗಾರಿ; ಸಿದ್ದು ನಾಯಕ್ ಹತ್ತಿಕುಣಿ ಆರೋಪ
ಸಿದ್ದು ನಾಯಕ್ ಹತ್ತಿಕುಣಿ
ವಡಗೇರಾ: ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನಾದ್ಯಂತ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆ ಅಡಿಯಲ್ಲಿ ಬರುವ ಜೆಜಿಎಂ ಕಾಮಗಾರಿಯು ಸಂಪೂರ್ಣ ಕಳಪೆ ಮಟ್ಟದ ಕಾಮಗಾರಿ ನಡೆದಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದು ನಾಯಕ್. ಹತ್ತಿಕುಣಿ ಆರೋಪಿಸಿದ್ದಾರೆ.
ಈ ಯೋಜನೆ ಸಂಪೂರ್ಣವಾಗಿ ಹಳ್ಳ ಹಿಡಿದಿದೆ. ಸರಕಾರದ ಹಣವು ಗುತ್ತಿಗೆದಾರರ ಪಾಲಾಗಿದ್ದು ಇದರಲ್ಲಿ ನೇರವಾಗಿ ಅಧಿಕಾರಿಗಳು ಶಾಮಿಯಲಾಗಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈಗಾಗಲೇ ಬೇಸಿಗೆಯು ಆರಂಭವಾಗಿದ್ದು ತಾಲೂಕಿನ ಜನರಿಗೆ ಕುಡಿಯುವ ನೀರಿನ ಆಹಾಕಾರ ಹೆಚ್ಚಾಗಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ಜೆಜಿಎಂ ಕಾಮಗಾರಿಯು ಸಾರ್ವಜನಿಕರ ಉಪಯೋಗಕ್ಕೆ ಬಾರದಂತಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಇದಕ್ಕೆ ಪ್ರಮುಖ ಕಾರಣ ಅಧಿಕಾರಿಗಳ ನಿರ್ಲಕ್ಷ ಗ್ರಾಮೀಣ ಭಾಗದಲ್ಲಿ ಕಾಮಗಾರಿ ಸಂಪೂರ್ಣವಾಗಿ ಮುಗಿಯದಿದ್ದರೂ ಕೂಡಾ ಅಧಿಕಾರಿಗಳು ಮುಂಚಿತವಾಗಿಯೇ ಬಿಲ್ ಪಾವತಿಸಿದ್ದಾರೆ. ಹಲವು ಗ್ರಾಮಗಳಲ್ಲಿ ಕಾಮಗಾರಿ ಮುಗಿದಿದ್ದರೂ ಮನೆಗಳಿಗೆ ಹನಿ ನೀರು ಸರಬರಾಜು ಆಗುತ್ತಿಲ್ಲ ಆದರೆ ಸರಕಾರದ ಹಣ ಮಾತ್ರ ನೀರಿನಂತೆ ಪೊಲಾಗಿದೆ ಕುಡಿಯಲು ಮಾತ್ರ ನೀರು ಸಿಗುತ್ತಿಲ್ಲ. ಮೇಲಾಧಿಕಾರಿಗಳು ಮಾತ್ರ ಹವಾ ನಿಯಂತ್ರಣ ಕೊಠಡಿಯಲ್ಲಿ ಕುಳಿತು ಮಜಾ ಮಾಡುತ್ತಿದ್ದಾರೆ. ಕೂಡಲೇ ಜಿಲ್ಲಾ ಪಂಚಾಯಿತಿ ಸಿಇಒ ರವರು ಗ್ರಾಮೀಣ ಪ್ರದೇಶಗಳಿಗೆ ತೆರಳಿ ತನಿಖೆ ಮಾಡಿ ತಪ್ಪಿಸ್ತ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದು ನಾಯಕ್ ಹತ್ತಿಕುಣಿ ಅಗ್ರಹಿಸಿದ್ದಾರೆ.