×
Ad

ಯಾದಗಿರಿ| ಕಳಪೆ ಸುತ್ತುಗೋಡೆ ಕಾಮಗಾರಿ: ಮಹೇಶರಡ್ಡಿ ಮುದ್ನಾಳ ಆರೋಪ

Update: 2025-07-16 18:30 IST

ಯಾದಗಿರಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೈಕ್ರೋ ಯೋಜನೆಯಡಿ 2024-25ನೇ ಸಾಲಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಮಂಜೂರಾದ ನಗರದ ವಿವಿಧ ಕಾಮಗಾರಿಗಳಲ್ಲಿ ಕಳಪೆ ಕಾಮಗಾರಿ ಎದ್ದು ಕಾಣುತ್ತಿದೆ ಎಂದು ಬಿಜೆಪಿ ಯುವ ಮುಖಂಡ ಮಹೇಶರಡ್ಡಿ ಮುದ್ದಾಳ ಆರೋಪಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಭೂಸೇನಾ ನಿಗಮದ ಅಡಿಯಲ್ಲಿ ನಡೆಯುತ್ತಿರುವ ಈ ಕಾಮಗಾರಿಗಳು ಉತ್ತಮ ಗುಣಮಟ್ಟದಿಂದ ಕೂಡಿಲ್ಲ. ಸಿಮೆಂಟ್ ಕಾಂಕ್ರಿಟ್ ಕೆಲಸವು ಕ್ಯೂರಿಂಗ್ ಇಲ್ಲದೆ ಅಲ್ಲಲ್ಲಿ ಬಿರುಕು ಬಿಡುತ್ತಿದೆ. ಕಲ್ಲಿನ ಡಿವೈಡರ್‌ಗಳಲ್ಲಿ ಕಲ್ಲುಗಳು ಅಲ್ಲಲ್ಲಿ ಉದುರಿ ಬೀಳುತ್ತಿದೆ. ರಸ್ತೆಯಲ್ಲಿ ಅಧಿಕ ಪ್ರಮಾಣದ ಕಲ್ಲುಗಳು ಅಲ್ಲಲ್ಲಿ ಹಾಕಿರುವುದರಿಂದ ವಾಹನ ಸವಾರರಿಗೆ ಮತ್ತು ಪಾದಚಾರಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಈ ವೇಳೆ ಅಪಘಾತ ಸಂಭವಿಸಿದರೆ ಇದಕ್ಕೆ ಯಾರು ಹೊಣೆ ಎಂದು ಅವರು ಪ್ರಶ್ನಿಸಿದ್ದಾರೆ.

ಅಧಿಕಾರಿಗಳ ಮತ್ತು ಗುತ್ತಿಗೆದಾರರ ಭ್ರಷ್ಟಾಚಾರ ಮತ್ತು ಕಳ್ಳಾಟದಿಂದ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ. ನಗರ ಸುಂದರೀಕರಣ ಮಾಡದೇ ಬಹುಪಾಲು ಹಣವನ್ನು ಅಧಿಕಾರಿಗಳು ಲೂಟಿ ಹೊಡೆಯುತ್ತಿದ್ದಾರೆ ಎಂದು ಮುದ್ನಾಳ ಆರೋಪಿಸಿದ್ದಾರೆ.

ಜಿಲ್ಲಾಡಳಿತ ಇದರ ಬಗ್ಗೆ ಗಮನ ಹರಿಸಿ ಸೂಕ್ತ ಕಮ ಜರುಗಿಸಲು ಅವರು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News