×
Ad

ರಾಯಚೂರು: ಸೆ.3 ರಿಂದ ಸೆ.14ರ ವರೆಗೆ ʼಸೀರತ್ ಅಭಿಯಾನʼ

Update: 2025-09-02 19:36 IST

ರಾಯಚೂರು:  ಜಮಾಅತೆ ಇಸ್ಲಾಮಿ ಹಿಂದ್ ರಾಯಚೂರು ಜಿಲ್ಲಾ ಘಟಕದ ವತಿಯಿಂದ 'ನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್ (ಸ)' ಶೀರ್ಷಿಕೆಯಡಿ ಸೆಪ್ಟೆಂಬರ್ 3 ರಿಂದ 14ರ ವರೆಗೆ ಜಿಲ್ಲಾದ್ಯಂತ ಸೀರತ್‌ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ಸಂಚಾಲಕ ಸಲೀಮ್ ಪಾಷಾ ತಿಳಿಸಿದರು.

ಅವರು ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಪ್ರವಾದಿ ಮುಹಮ್ಮದ್ (ಸ) ಅವರ ನ್ಯಾಯ ಮತ್ತು ಮಾನವೀಯತೆಯ ಸಂದೇಶಗಳನ್ನು ನಾಡಿನ ಜನತೆಗೆ ತಲುಪಿಸುವುದು ಮತ್ತು ವಿವಿಧ ಧರ್ಮಿಯರ ನಡುವಿನ ಪರಸ್ಪರ ಸಂಬಂಧಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದರು.

ಈ ಅಭಿಯಾನದ ಪ್ರಯುಕ್ತ ಶಾಂತಿ ಪ್ರಕಾಶನ ಪ್ರಕಟಿಸಿರುವ ಪ್ರವಾದಿಯವರ ಬದುಕು ಮತ್ತು ಸಂದೇಶಗಳ ಬಗ್ಗೆ ಬೆಳಕು ಚೆಲ್ಲುವ ಎರಡು ಹೊಸ ಪುಸ್ತಕಗಳನ್ನು ರಾಜ್ಯಾದ್ಯಂತ ಬಿಡುಗಡೆಗೊಳಿಸಲಾಗುವುದು.

ಈ ಅಭಿಯಾನದ ಭಾಗವಾಗಿ ರಾಜ್ಯಾದ್ಯಂತ ವಿವಿಧ ಸಮಾಜ ಸೇವಾ ಚಟುವಟಿಕೆಗಳು, ಸಂವಾದ, ವಿಚಾರಗೋಷ್ಠಿ, ಸಾರ್ವಜನಿಕ ಸಭೆಗಳು, ಪ್ರಬಂಧ ಸ್ಪರ್ಧೆ ಮುಂತಾದ ಹಲವು ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.

ಸುದ್ದಿಗೊಷ್ಟಿಯಲ್ಲಿ ಜಮಾಅತೆ ಇಸ್ಲಾಂ ಹಿಂದ್ ಜಿಲ್ಲಾ ಘಟಕದ ಅಧ್ಯಕ್ಷ ಅಸಿಮುದ್ದಿನ್ ಅಖ್ತರ್, ನೂರು ಜಾವೀದ್ ಮನಿಯಾರ್, ಜಹೀರ್ ಅಹ್ಮದ್‌ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News