ಯಾದಗಿರಿಯಲ್ಲಿ ಜಿಲ್ಲಾ ಬಿಜೆಪಿಯಿಂದ ಸೇವಾ ಸಂಕಲ್ಪ ಕಾರ್ಯಕ್ರಮ
ಯಾದಗಿರಿ: ಕಳಂಕರಹಿತ ಹಾಗೂ ಅಭಿವೃದ್ಧಿಯ ಹರಿಕಾರರಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮುಂದಿನ ಪೀಳಿಗೆಗೆ ಆದರ್ಶ ಹಾಗೂ ಶ್ರೇಷ್ಠ ವ್ಯಕ್ತಿಯಾಗಿ ರೂಪುಗೊಳ್ಳಲಿದ್ದಾರೆ ಎಂದು ಮಾಜಿ ಸಚಿವ ನರಸಿಂಹ ನಾಯಕ (ರಾಜುಗೌಡ) ಬಣ್ಣಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸತತ 25 ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿಯಾಗಿ ಹಾಗೂ ದೇಶದ ಪ್ರಧಾನಮಂತ್ರಿಯಾಗಿ ಯಶಸ್ವಿಯಾಗಿ ಜನರ ಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಸೇವಾ ಸಂಕಲ್ಪ ಕಾರ್ಯಕ್ರಮದಡಿ ಬುಧವಾರ ನಗರದ ಸುಭಾಷ್ ವೃತ್ತದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಿದ್ದ ನರೇಂದ್ರ ಮೋದಿ ಅವರ ವರ್ಚುವಲ್ ಬಹಿರಂಗ ಸಭೆಯಲ್ಲಿ ಸೇವಾ ಜ್ಯೋತಿಯನ್ನು ಸ್ವಾಗತಿಸಿ ಅವರು ಮಾತನಾಡಿದರು.
ಸುಧೀರ್ಘ ಕಾಲದಿಂದ ಅಧಿಕಾರದಲ್ಲಿರುವ ಮೋದಿ ಅವರು ಒಂದೇ ಒಂದು ದಿನ ರಜೆ ಪಡೆಯದೆ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಧೀಮಂತ ನಾಯಕರಾಗಿದ್ದಾರೆ ಎಂದು ಹೇಳಿದರು.
ಜಿಲ್ಲಾಧ್ಯಕ್ಷ ಬಸವರಾಜಪ್ಪ ವಿಭೂತಿಹಳ್ಳಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಂತಹ ನಾಯಕರು ನಮಗೆ ದೊರೆತಿರುವುದು ನಮ್ಮೆಲ್ಲರ ಸೌಭಾಗ್ಯ. ಗುಜರಾತ್ ಮುಖ್ಯಮಂತ್ರಿಯಾಗಿ ಹಾಗೂ ಈಗ ದೇಶದ ಪ್ರಧಾನಮಂತ್ರಿಯಾಗಿ ಅವರು ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಿದ್ದಾರೆ. ಅವರ ಕೈ ಬಲಪಡಿಸಲು ನಾವೆಲ್ಲರೂ ಶ್ರಮಿಸೋಣ ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯದರ್ಶಿ ಕು. ಲಲಿತಾ ಅನಪುರ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಮಹೇಶರೆಡ್ಡಿ ಮುದ್ನಾಳ ಹಾಗೂ ರಾಜಶೇಖರ್ ಗೂಗಲ್, ನಾಗರತ್ನ ಕುಪ್ಪಿ, ಮಾಜಿ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ, ಚಂದ್ರಶೇಖರ್ ಮಾಗನೂರ, ದೇವಿಂದ್ರನಾಥ ನಾದ, ಎಚ್.ಸಿ. ಪಾಟೀಲ, ಸಿದ್ದಣ್ಣಗೌಡ ಕಾಡಂನೋರ್, ವೆಂಕಟರೆಡ್ಡಿ ಅಬ್ಬೆತೂಮಕೂರ, ಮಾಜಿ ಜಿ.ಪಂ. ಅಧ್ಯಕ್ಷ ರಾಜಾ ಹಣಮಂತ ನಾಯಕ, ಯಲ್ಲಪ್ಪ ಕುರಕುಂದಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮೆಲ್ಲಪ್ಪ ಗುಳಗಿ ಹಾಗೂ ಪರಶುರಾಮ ಕುರಕುಂದಿ, ಶಿವರಾಜ್ ದೇಶಮುಖ್, ಜಿಲ್ಲಾ ವಕ್ತಾರ ಹಣಮಂತ ಇಟಗಿ, ವೇಣುಮಾಧವ ನಾಯಕ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.