ಶಹಾಪುರ: ಶಿರವಾಳ ಗ್ರಾಮದಿಂದ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಬದಿಯಲ್ಲಿ ಹೊಸ ವಿದ್ಯುತ್ ಲೈನ್ ಅಳವಡಿಸುವ ಉದ್ದೇಶದಿಂದ ವಿದ್ಯುತ್ ಕಂಬಗಳನ್ನು ನೆಡಲಾಗಿದ್ದು, ಅವುಗಳ ಅಳವಡಿಕೆ ಸ್ಥಳದ ಕುರಿತು ಸಾರ್ವಜನಿಕರಲ್ಲಿ ಆತಂಕ ಮೂಡಿದೆ.

ಈ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದು, ರಸ್ತೆ ಬದಿಯಲ್ಲೇ ವಿದ್ಯುತ್ ಕಂಬಗಳನ್ನು ಅಳವಡಿಸಿರುವುದರಿಂದ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ತೊಂದರೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ರಾತ್ರಿ ವೇಳೆ ಕಂಬಗಳು ಸ್ಪಷ್ಟವಾಗಿ ಕಾಣಿಸದೆ ಅಪಘಾತ ಸಂಭವಿಸುವ ಭೀತಿ ಎದುರಾಗಿದೆ. ವಿದ್ಯುತ್ ಕಂಬಗಳನ್ನು ಅಳವಡಿಸುವ ಸಂದರ್ಭದಲ್ಲಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಲಾಗಿದೆಯೇ ಎಂಬ ಪ್ರಶ್ನೆಯೂ ಸಾರ್ವಜನಿಕರಲ್ಲಿ ಮೂಡಿದೆ.

ಸಂಬಂಧಪಟ್ಟ ವಿದ್ಯುತ್ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಂಬಗಳ ಅಳವಡಿಕೆ ಕುರಿತು ಪರಿಶೀಲನೆ ನಡೆಸಬೇಕು. ರಸ್ತೆ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಸಂಭವನೀಯ ಅನಾಹುತವನ್ನು ತಪ್ಪಿಸಬೇಕು ಎಂದು ಚನ್ನಪ್ಪಗೌಡ ಶಿರವಾಳ ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor