ಶಹಾಪುರ | ಆಶಾಕಿರಣ ಸಾಮಾಜಿಕ ಸೇವಾ ಸಂಸ್ಥೆಯ ನೂತನ ಪದಾಧಿಕಾರಿಗಳ ಆಯ್ಕೆ
ಶಹಾಪುರ: ಯಾದಗಿರಿ ಜಿಲ್ಲೆಯ ಆಶಾಕಿರಣ ಸಾಮಾಜಿಕ ಸೇವಾ ಸಂಸ್ಥೆಯ 2026–27 ಹಾಗೂ 2027–28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಶಹಾಪುರ ಪಟ್ಟಣದ ಹೋಟೆಲ್ ನಂದಿ ಇಂಟರ್ನ್ಯಾಷನಲ್ನಲ್ಲಿ ನಡೆಯಿತು.
ಸಂಸ್ಥೆಯ ನೂತನ ಅಧ್ಯಕ್ಷೆಯಾಗಿ ಪ್ರಿಯಾಂಕಾ, ಕಾರ್ಯದರ್ಶಿಯಾಗಿ ಸಂಜ್ಜು ಹಾಗೂ ಖಜಾಂಚಿಯಾಗಿ ಬಸವರಾಜ್ ಆಯ್ಕೆಯಾಗಿದ್ದಾರೆ. ಸಾಮಾನ್ಯ ಸದಸ್ಯರಾಗಿ ಮಹೇಬೂಬ್, ಭವಾನಿ, ವಿದ್ಯಾಶ್ರೀ ಹಾಗೂ ಪ್ರತೀಕ್ಷಾ ಆಯ್ಕೆಯಾಗಿದ್ದಾರೆ.
ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಸಾಮಾಜಿಕ ಅಭಿವೃದ್ಧಿ ಹಾಗೂ ಸೇವೆಯ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಆಶಾಕಿರಣ ಸಂಸ್ಥೆಯು ಮುಂದಿನ ದಿನಗಳಲ್ಲಿ ವಿವಿಧ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳುವ ಮೂಲಕ ಸಮುದಾಯದ ಏಳಿಗೆಗೆ ಶ್ರಮಿಸುವ ಆಶಯ ಹೊಂದಿದೆ. ನೂತನ ಪದಾಧಿಕಾರಿಗಳು ಸಂಸ್ಥೆಯ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ, ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸುವ ನಿರೀಕ್ಷೆ ವ್ಯಕ್ತವಾಗಿದೆ.