ಸಾಂದರ್ಭಿಕ ಚಿತ್ರ

ಸುರಪುರ: ತಾಲೂಕಿನ ಗ್ರಾಮವೊಂದರ ದೇವಸ್ಥಾನದ ಬಳಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ, ಅವರ ಆಭರಣ ಕಿತ್ತಿಕೊಂಡಿರುವ ಆರೋಪ ಕೇಳಿಬಂದಿದೆ.

ಬೆಳಗಿನ ಜಾವ ಮಹಿಳೆಯೊಬ್ಬರು ಬಹಿರ್ದೆಸೆಗೆಂದು ತೆರಳಿದ್ದ ವೇಳೆ, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ದಾಡೇರಕೊಪ್ಪ ಗ್ರಾಮದ ಶ್ರೀಮಂತ ಕರಿಕಟ್ಟಿ ಎಂಬಾತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ, ಅವರ ಕುತ್ತಿಗೆಯಲ್ಲಿದ್ದ 5 ಗ್ರಾಂ ತೂಕದ ಬಂಗಾರದ ಬೆಂಡೋಲೆಗಳನ್ನು ಬಲವಂತವಾಗಿ ಕಿತ್ತಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವೇಳೆ ಮಹಿಳೆ ಚೀರಿಕೊಂಡಿದ್ದು, ಅವರ ಕೂಗು ಕೇಳಿ ಘಟನಾ ಸ್ಥಳಕ್ಕೆ ತೆರಳಿದ ಬೈರಣ್ಣ ಅಂಬಿಗೇರ ಹಾಗೂ ಮೌನೇಶ ಅಮ್ಮಾಪುರ ಅವರು ದೌರ್ಜನ್ಯ ನಡೆಸುತ್ತಿದ್ದ ಆರೋಪಿಯನ್ನು ಹಿಡಿದಿದ್ದಾರೆ. ಬಳಿಕ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಮಹಿಳೆಯ ಮೇಲೆ ದೌರ್ಜನ್ಯ ನಡೆಸಿರುವ ಆರೋಪಿತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೌನೇಶ ಕ್ವಾಟಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಸುರಪುರ ಠಾಣೆಯ ಆರಕ್ಷಕ ನಿರೀಕ್ಷಕ ಉಮೇಶ ಎಂ. ನಾಯಕ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor