ಸುರಪುರ| ಜಮೀನಿನ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ: ಹಲವರಿಗೆ ಗಾಯ
Update: 2026-02-01 22:14 IST
ಸುರಪುರ: ರಸ್ತೆಯ ಮೇಲೆ ಕಟ್ಟಡ ಕಟ್ಟುತ್ತಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದು ಹಲವರು ಗಾಯಗೊಂಡಿರುವ ಘಟನೆ ನಗರದ ದಖನಿ ಮೊಹಲ್ಲಾದ ಟಿಪ್ಪು ಸುಲ್ತಾನ್ ವೃತ್ತದ ಬಳಿ ನಡೆದಿದೆ.
"ಸರಕಾರಿ ರಸ್ತೆಯ ಮೇಲೆ ಕಟ್ಟಡ ಕಟ್ಟಲು ಬುನಾದಿ ಅಗೆಯುತ್ತಿದ್ದು ಇದನ್ನು ಪ್ರಶ್ನಿಸಿದಕ್ಕೆ ನಮ್ಮ ಮೇಲೆ ಹಲ್ಲೆ ನಡೆಸಲಾಗಿದೆ. ಇದು ಸರಕಾರಿ ಜಮೀನಾಗಿದ್ದು, ಈ ಕುರಿತು ಈಗಾಗಲೇ ನಗರ ಸಭೆಗೆ ಮತ್ತು ಪೊಲೀಸ್ ಠಾಣೆಗೂ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ ಅಧಿಕಾರಿಗಳು ಕ್ರಮ ಕೈಗೊಳ್ಳದೆ ಇರುವುದರಿಂದ ಈಗ ಕಟ್ಟಡಕ್ಕೆ ಅಡಿಪಾಯ ಹಾಕಲು ಮುಂದಾಗಿದ್ದಾರೆ" ಎಂದು ಘಟನೆಯಲ್ಲಿ ಗಾಯಗೊಂಡಿರುವ ಇಬ್ರಾಹಿಂ ಆರೋಪಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೆಲವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.