×
Ad

ಸುರಪುರ | ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ :ಅಕ್ರಮವಾಗಿ ಸಂಗ್ರಹಿಸಿದ್ದ ಪ್ಲಾಸ್ಟಿಕ್ ವಶಕ್ಕೆ

Update: 2026-01-29 18:42 IST

ಸುರಪುರ : ನಗರದ ರಂಗಂಪೇಟೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ನಗರಸಭೆ ಅಧಿಕಾರಿಗಳು ದಾಳಿ ನಡೆಸಿ, ಅಂಗಡಿಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪ್ಲಾಸ್ಟಿಕ್ ವಶಪಡಿಸಿಕೊಂಡು ವ್ಯಾಪಾರಸ್ಥರಿಗೆ ನೋಟಿಸ್ ನೀಡಿ ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಪೌರಾಯುಕ್ತ ಬಸವರಾಜ ಟಣಕೆದಾರ, ಪ್ಲಾಸ್ಟಿಕ್ ಬಳಕೆ ಇಡೀ ಪರಿಸರಕ್ಕೆ ಭಾರೀ ಹಾನಿ ಉಂಟುಮಾಡುತ್ತಿದ್ದು, ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸಿ ಬಟ್ಟೆ ಚೀಲಗಳನ್ನು ಬಳಸಬೇಕು ಎಂದು ಮನವಿ ಮಾಡಿದರು. ಸರ್ಕಾರ ಈಗಾಗಲೇ ಪ್ಲಾಸ್ಟಿಕ್ ನಿಷೇಧ ಜಾರಿಗೆ ತಂದಿದ್ದು, ನಿರಂತರವಾಗಿ ಜಾಗೃತಿ ಮೂಡಿಸುತ್ತಿದ್ದರೂ ಸಹ ಕೆಲ ವ್ಯಾಪಾರಸ್ಥರು ಅಕ್ರಮವಾಗಿ ಪ್ಲಾಸ್ಟಿಕ್ ಸಂಗ್ರಹಿಸಿ ಬಳಕೆ ಮಾಡುತ್ತಿರುವುದು ಬೇಸರದ ಸಂಗತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಒಂದು ಪ್ಲಾಸ್ಟಿಕ್ ಮಣ್ಣಿನಲ್ಲಿ ಸೇರಿಕೊಂಡರೆ ಅನೇಕ ವರ್ಷಗಳವರೆಗೆ ಕೊಳೆಯದೇ ಉಳಿದು ಮಣ್ಣಿನ ಗುಣಮಟ್ಟ ಹಾಳುಮಾಡುತ್ತದೆ. ಅಲ್ಲದೆ ಪ್ಲಾಸ್ಟಿಕ್‌ನಲ್ಲಿ ಬಿಸಿಯಾದ ಆಹಾರ ಪದಾರ್ಥಗಳನ್ನು ಹಾಕುವುದರಿಂದ ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳು ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆಯ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕು ಎಂದು ಹೇಳಿದರು.

ಈ ಬಾರಿ ಎಚ್ಚರಿಕೆ ನೀಡಲಾಗಿದ್ದು, ಮುಂದಿನ ಬಾರಿ ಪ್ಲಾಸ್ಟಿಕ್ ಬಳಕೆ ಅಥವಾ ಸಂಗ್ರಹ ಪತ್ತೆಯಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.

ನಗರದ ರಂಗಂಪೇಟೆ, ಮಹಾತ್ಮ ಗಾಂಧಿ ವೃತ್ತ ಹಾಗೂ ದರ್ಬಾರ್ ರಸ್ತೆಯ ಅಂಗಡಿಗಳಲ್ಲಿ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡು ನೋಟಿಸ್ ನೀಡಲಾಗಿದೆ.

ಈ ವೇಳೆ ನಗರಸಭೆ ವ್ಯವಸ್ಥಾಪಕ ಯಲ್ಲಪ್ಪ ನಾಯಕ, ಸಿಬ್ಬಂದಿಗಳಾದ ಗುರುಸ್ವಾಮಿ, ಮೈನುದ್ದೀನ್, ದುರ್ಗಪ್ಪ, ಹಣಮಂತರಾಯ ಸೇರಿದಂತೆ ಕಾರ್ಮಿಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News