×
Ad

ಸುರಪುರ |ಆರೆಸ್ಸೆಸ್‌ ವಿರುದ್ಧ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

Update: 2025-11-10 21:38 IST

ಸುರಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ ದೇಶದಲ್ಲಿ ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ವಿಭಜನೆಯನ್ನು ಉಂಟುಮಾಡುತ್ತದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಸಂಘಟನೆಯ ಜಿಲ್ಲಾ ಸಂಚಾಲಕ ಮಾಳಪ್ಪ ಕಿರದಳ್ಳಿ ಆರೋಪಿಸಿದ್ದಾರೆ. 

ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ತಾಲೂಕು ಘಟಕದಿಂದ ನಗರದ ತಹಶೀಲ್ದಾರ್ ಕಚೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಳಪ್ಪ ಕಿರದಳ್ಳಿ, ಸರಕಾರ ಆರೆಸ್ಸೆಸ್‌ಗೆ ಕಡಿವಾಣ ಹಾಕದಿದ್ದಲ್ಲಿ ಮುಂಬರುವ ದಿನಗಳಲ್ಲಿ ನಿರಂತರವಾಗಿ ಪ್ರತಿಭಟನೆಯನ್ನು ನಡೆಸಲಿದ್ದೇವೆ ಎಂದು ಎಚ್ಚರಿಸಿದರು.

ನಂತರ ಮುಖ್ಯಮಂತ್ರಿಗೆ ಉಪ ತಹಸಿಲ್ದಾರ್ ಮಲ್ಲಯ್ಯ ದಂಡು ಅವರ ಮೂಲಕ ಮನವಿ ಪತ್ರವನ್ನು ಸಲ್ಲಿಸಿದರು.  

ಪ್ರತಿಭಟನೆಯಲ್ಲಿ ಸಂಘಟನೆಯ ತಾಲೂಕು ಸಂಚಾಲಕ ಶರಣಪ್ಪ ತಳವಾರಗೇರಾ, ತಾಲೂಕು ಸಂಘಟನಾ ಸಂಚಾಲಕರಾದ ಮಲ್ಲಿಕಾರ್ಜುನ ಹಾದಿಮನಿ, ಗೊಲ್ಲಾಳಪ್ಪ ಕಟ್ಟಿಮನಿ, ಪರಶುರಾಮ ಸಾಸನೂರ, ಪ್ರಕಾಶ ಕಟ್ಟಿಮನಿ, ಶರಣು ಅಂಬರಖೇಡ, ಲಾಲು ಚವ್ಹಾಣ್, ಕೆಂಚಪ್ಪ ಕಟ್ಟಿಮನಿ, ಹೊನ್ನಪ್ಪ ಗೌಂಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು. 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News