ಸುರಪುರ | ನಗನೂರ ಗ್ರಾಮ ಪಂಚಾಯಿತಿಯಲ್ಲಿ ಜಾಬ್ ಕಾರ್ಡ್ ಮೇಳ
ಸುರಪುರ: ತಾಲೂಕಿನ ನಗನೂರ ಗ್ರಾಮ ಪಂಚಾಯಿತಿಯಲ್ಲಿ ತಾಲೂಕು ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ ಜಾಬ್ ಕಾರ್ಡ್ ಮೇಳ ಹಾಗೂ ವಿಕಸಿತ ಭಾರತ–ಗ್ಯಾರಂಟಿ ಫಾರ್ ರೋಜಗಾರ್ ಆ್ಯಂಡ್ ಆಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ ಐಇಸಿ ಚಟುವಟಿಕೆಗಳನ್ನು ನಡೆಸಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಕೆ.ಪಿ. ಅವರ ನೇತೃತ್ವದಲ್ಲಿ ಜಾಬ್ ಕಾರ್ಡ್ ಮೇಳ ಆಯೋಜಿಸಲಾಗಿತ್ತು. ಈ ವೇಳೆ ಗ್ರಾಮಸ್ಥರಿಗೆ ಹೊಸ ಜಾಬ್ ಕಾರ್ಡ್ ಪಡೆಯುವ ವಿಧಾನ, ಹೆಸರು ಸೇರ್ಪಡೆ, ಹೆಸರು ತೆಗೆದುಹಾಕುವುದು, ಶಿಫ್ಟ್, ಇ-ಕೆವೈಸಿ ಹಾಗೂ ಗ್ರಾಮೀಣ ರೋಜಗಾರ್ ಗ್ಯಾರಂಟಿ ಕಾರ್ಡ್ ಪಡೆಯುವ ಕುರಿತು ಸಮಗ್ರ ಮಾಹಿತಿ ನೀಡಲಾಯಿತು.
ಯೋಜನೆಯಡಿ ಕೂಲಿ ದರವನ್ನು 370 ರೂ. ನಿಂದ 382 ರೂ. ಗೆ ಹಾಗೂ ವಾರ್ಷಿಕ ಮಾನವ ದಿನಗಳನ್ನು 100ರಿಂದ 125ಕ್ಕೆ ಹೆಚ್ಚಿಸಿರುವ ಕುರಿತು ಕರಪತ್ರಗಳನ್ನು ಹಂಚಿಕೆ ಮಾಡುವ ಮೂಲಕ ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಜಾಬ್ ಕಾರ್ಡ್ ಹೊಂದಿರುವ ಪ್ರತಿಯೊಂದು ಕುಟುಂಬವೂ ಯೋಜನೆಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಅಗತ್ಯವಿರುವವರು ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸಬೇಕು ಎಂದು ಅಧಿಕಾರಿಗಳು ತಿಳಿಸಿದರು. ಮೇಟ್‌ಗಳ ಮೂಲಕ ಒಟ್ಟು 418 ಕೂಲಿ ಕಾರ್ಮಿಕರು ನಮೂನೆ–6 ಪಡೆದರು.
ಈ ಸಂದರ್ಭದಲ್ಲಿ ಐಇಸಿ ಸಂಯೋಜಕ ಮಲ್ಲಿಕಾರ್ಜುನ ದೇವಾಪಖರ, ಡಾಟಾ ಎಂಟ್ರಿ ಆಪರೇಟರ್ ಬಸವರಾಜ, ಜಿಕೆಎಂ, ಕೂಲಿ ಕಾರ್ಮಿಕರು ಹಾಗೂ ಗ್ರಾಮದ ಸಾರ್ವಜನಿಕರು ಉಪಸ್ಥಿತರಿದ್ದರು.