×
Ad

ಸುರಪುರ | ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಮಹರ್ಷಿ ವಾಲ್ಮೀಕಿ ಸಂದೇಶವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ : ಶಾಸಕ ರಾಜಾ ವೇಣುಗೋಪಾಲ ನಾಯಕ

Update: 2025-10-07 20:04 IST

ಸುರಪುರ: ಶ್ರೀ ಮಹರ್ಷಿ ವಾಲ್ಮೀಕಿ ಅವರು ನೀಡಿದ ಸಂದೇಶವನ್ನು ಎಲ್ಲರೂ ಬದುಕಿನಲ್ಲಿ ಅಳವಡಿಸಿಕೊಳ್ಳೋಣ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ತಿಳಿಸಿದರು.

ನಗರದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಾಲ್ಮೀಕಿ ಅವರಿಂದ ಶ್ರಮ ಸತ್ಯ ಸೇವೆಯನ್ನು ಕಲಿಯಬೇಕು ಎಂದರು.

ಈಗ ಜಾತಿ ಜಾತಿ ಎಂದು ಸಮಾಜ ಒಡೆಯುವ ಕೆಲಸ ಹೆಚ್ಚಾಗಿದ್ದು, ಎಲ್ಲರೂ ಒಗ್ಗಟ್ಟಾಗಿದ್ದಾಗ ದೇಶ ಅಭಿವೃದ್ಧಿಯಾಗಲಿದೆ ಎಂದರು.

ಉಪನ್ಯಾಸಕರಾಗಿ ಭಾಗವಹಿಸಿದ್ದ ಸಾಹಿತಿ ಮಹಾಂತೇಶ ಗೋನಾಲ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ರಂಗಗಳಲ್ಲಿ ಸಾಧನೆಗೈದ ಅಯ್ಯಣ್ಣ ಹಾಲಬಾವಿ, ಮೌನೇಶ ದೇವಾಪುರ, ಸೋಮನಾಥ ಗೋಸಲರ್, ನಾಗಮ್ಮ ಹಾಗೂ ರಾಧಿಕಾ ಇವರಿಗೆ ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಆರಂಭಕ್ಕೂ ಮೊದಲು ನಗರದ ಡೊಣ್ಣಿಗೇರಾದ ಮಹರ್ಷಿ ವಾಲ್ಮೀಕಿ ದೇವಸ್ಥಾನ ರಿಂದ ತಹಶೀಲ್ದಾರ್ ಕಚೇರಿವರೆಗೆ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ನಡೆಯಿತು.

ತಹಶೀಲ್ದಾರ್ ಹುಸೇನಸಾಬ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷ ಹೀನಾ ಕೌಸರ್, ಉಪಾಧ್ಯಕ್ಷ ರಾಜಾ ಪಿಡ್ಡ ನಾಯಕ,ನಯೋಪ್ರಾ ಅಧ್ಯಕ್ಷ ಪ್ರಕಾಶ ಗುತ್ತೇದಾರ್, ತಾಲೂಕ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಭೀಮನಗೌಡ ವ್ಹಿ.ಲಕ್ಷ್ಮಿ, ತಾ.ಪಂ ಇಓ ಬಸವರಾಜ ಸಜ್ಜನ್, ನಗರಸಭೆ ಕಮಿಷನರ್ ಬಸವರಾಜ ಟಣಕೆದಾರ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಎ.ಡಿ ಮಹ್ಮದ್ ಸಲೀಂ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬೀರಲಿಂಗ ಬಾದ್ಯಾಪುರ ಉಪಸ್ಥಿತರಿದ್ದರು.

ರಾಜಶೇಖರ ದೇಸಾಯಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು, ಮಾನಯ್ಯ ಕವಾಲ್ದಾರ್ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಮುಖಂಡರಾದ ರಮೇಶ್ ದೊರೆ ಆಲ್ದಾಳ, ವೆಂಕಟೇಶ ಬೇಟೆಗಾರ ,ಕಾಳಪ್ಪ ಕವಾತಿ, ಉಸ್ತಾದ್ ವಜಾಹತ್ ಹುಸೇನ್, ಜುಮ್ಮಣ್ಣ ಕೆಂಗುರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಾಲ್ಮೀಕಿ ಸಮಾಜದ ಮುಖಂಡರು ಸೇರಿ ನೂರಾರು ಜನ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News