×
Ad

ಸುರಪುರ | ಆನ್‌ಲೈನ್ ಔಷಧ ಮಾರಾಟಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಪ್ರತಿಭಟನೆ

Update: 2026-05-20 20:26 IST

ಸುರಪುರ: ಆನ್‌ಲೈನ್ ಮೂಲಕ ಔಷಧ ಮಾರಾಟ ಮಾಡುವುದನ್ನು ತಡೆಯುವಂತೆ ಆಗ್ರಹಿಸಿ ದೇಶವ್ಯಾಪಿ ಔಷಧ ಅಂಗಡಿಗಳ ಬಂದ್‌ಗೆ ನೈತಿಕ ಬೆಂಬಲ ಸೂಚಿಸಿ, ಸುರಪುರ ತಾಲೂಕು ಔಷಧಿ ಮಾರಾಟಗಾರರ ಸಂಘದ ವತಿಯಿಂದ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಸುಭಾಷ್ ಬೋಡ, ಸರ್ಕಾರ ತಕ್ಷಣವೇ ಆನ್‌ಲೈನ್ ಔಷಧ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಆನ್‌ಲೈನ್ ಮೂಲಕ ನಡೆಯುತ್ತಿರುವ ಔಷಧ ಮಾರಾಟದಿಂದ ಸಣ್ಣಪುಟ್ಟ ಔಷಧ ವ್ಯಾಪಾರಿಗಳಿಗೆ ಭಾರೀ ತೊಂದರೆ ಉಂಟಾಗುತ್ತಿದೆ. ಜೊತೆಗೆ, ಆನ್‌ಲೈನ್ ಮೂಲಕ ವಿತರಿಸುವ ಔಷಧಿಗಳ ಗುಣಮಟ್ಟದಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಗ್ರಾಹಕರ ಆರೋಗ್ಯಕ್ಕೂ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ವೈದ್ಯರ ಪ್ರಿಸ್ಕ್ರಿಪ್ಶನ್ ಇಲ್ಲದೆ ಔಷಧಿಗಳನ್ನು ಮಾರಾಟ ಮಾಡುವ ಮೂಲಕ ಸರ್ಕಾರದ ನಿಯಮಗಳ ಉಲ್ಲಂಘನೆಯಾಗುವ ಸಾಧ್ಯತೆಗಳೂ ಹೆಚ್ಚಿವೆ. ಈ ಎಲ್ಲ ಕಾರಣಗಳಿಂದ ಆನ್‌ಲೈನ್ ಔಷಧ ಮಾರಾಟವನ್ನು ನಿಯಂತ್ರಿಸಿ ಸಣ್ಣ ವ್ಯಾಪಾರಿಗಳನ್ನು ರಕ್ಷಿಸಬೇಕು ಎಂದು ಅವರು ಆಗ್ರಹಿಸಿದರು.

ಪ್ರತಿಭಟನೆಯ ನಂತರ ಪ್ರಧಾನಮಂತ್ರಿ ಅವರಿಗೆ ಉದ್ದೇಶಿಸಿದ ಮನವಿ ಪತ್ರವನ್ನು ಉಪ ತಹಶೀಲ್ದಾರ್ ಮೂಲಕ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಸುಧೀರ್ ಕೋಸಗಿ ಸೇರಿದಂತೆ ಅನೇಕ ಔಷಧ ವ್ಯಾಪಾರಿಗಳು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News