×
Ad

ಸುರಪುರ | ಖಾರಿಜ್ ಖಾತಾ ಭೂಮಿ ಮಂಜೂರಾತಿಗೆ ಒತ್ತಾಯಿಸಿ ಪ್ರತಿಭಟನೆ

Update: 2025-09-21 18:47 IST

ಸುರಪುರ: ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಹಿಂಭಾಗದಲ್ಲಿನ ಖಾರಿಜ್ ಖಾತಾ ಭೂಮಿಯನ್ನು ಅಭಿವೃದ್ಧಿ ಕಾಮಗಾರಿಗಳಿಗಾಗಿ ಮಂಜೂರು ಮಾಡುವಂತೆ ಆಗ್ರಹಿಸಿ, ದಲಿತ ಸಾಮೂಹಿಕ ಸಂಘಟನೆಗಳ ಒಕ್ಕೂಟದಿಂದ ನಗರದ ಅಂಬೇಡ್ಕರ್ ಮೂರ್ತಿ ಬಳಿಯಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಭಾಗವಹಿಸಿದ ಮುಖಂಡರು ಘೋಷಣೆಗಳನ್ನು ಕೂಗಿ, ಭೂಮಿಯನ್ನು ಮಂಜೂರು ಮಾಡುವವರೆಗೆ ಹೋರಾಟವನ್ನು ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಮಾನಪ್ಪ ಕಟ್ಟಿಮನಿ, ಶ್ರೀನಿವಾಸ ನಾಯಕ ಬೊಮ್ಮನಹಳ್ಳಿ, ತಿಪ್ಪಣ್ಣ ಶೆಳ್ಳಗಿ, ರಾಜು ಶಖಾಪುರ, ವೈಜನಾಥ ಹೊಸ್ಮನಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News