ಸುರಪುರ | ಸಮಾಜ ಸೇವಕ ರಮೇಶ ದೊರೆ ಆಲ್ದಾಳಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ
ಸುರಪುರ: ನಗರದ ಸಮಾಜ ಸೇವಕ ಹಾಗೂ ಕಾಂಗ್ರೆಸ್ ಪಕ್ಷದ ಎಸ್ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ ದೊರೆ ಆಲ್ದಾಳ ಅವರಿಗೆ ತಮಿಳುನಾಡಿನ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ಯುನಿವರ್ಸಿಟಿ ವತಿಯಿಂದ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ರಮೇಶ ದೊರೆ ಆಲ್ದಾಳ ಅವರ ಸಮಾಜ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಲಾಗುತ್ತಿದೆ ಎಂದು ವಿಶ್ವವಿದ್ಯಾಲಯದ ಉಪ ಕುಲಸಚಿವರು ಪ್ರದಾನ ಮಾಡಿದ ಪ್ರಮಾಣ ಪತ್ರದಲ್ಲಿ ತಿಳಿಸಿದ್ದು, ತಮಿಳುನಾಡಿನ ಸೇಲಂ ಜಿಲ್ಲೆಯ ಹೊಸೂರ ನಗರದ ಫಾರ್ಚೂನ್ ಗೆಸ್ಟ್ ಹೌಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ರಮೇಶ ದೊರೆ ಆಲ್ದಾಳ ಅವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ದೊರೆತಿದ್ದರಿಂದ ಅವರ ಹಿತೈಷಿಗಳು ಹಾಗೂ ಸ್ನೇಹಿತರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ರಮೇಶ ದೊರೆ ಅವರು ವಿಶ್ವವಿದ್ಯಾಲಯದ ಮಂಡಳಿ ತಮ್ಮ ಸಮಾಜ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿದ್ದಕ್ಕೆ ಧನ್ಯವಾದ ಸಲ್ಲಿಸುವುದಾಗಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.