×
Ad

ಸುರಪುರ | ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕರ ಪ್ರಥಮ ಪುಣ್ಯಸ್ಮರಣೆ ಕಾರ್ಯಕ್ರಮ

Update: 2025-02-25 18:05 IST

ಸುರಪುರ: ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷರು ಹಾಗೂ ಕ್ಷೇತ್ರದ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರು ನಿಧನರಾಗಿ ಒಂದು ವರ್ಷ ಕಳೆದ ಹಿನ್ನೆಲೆಯಲ್ಲಿ ನಗರದ ಕುಂಬಾರಪೇಟ ವೃತ್ತದಲ್ಲಿನ ದಿ.ರಾಜಾ ವೆಂಕಟಪ್ಪ ನಾಯಕ ಅವರ ನಾಮಫಲಕದ ಬಳಿ ಅನೇಕ ಮುಖಂಡರು ಹಾಗೂ ಅವರ ಅಭಿಮಾನಿಗಳು ಪ್ರಥಮ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಆಚರಿಸಿದರು.

ರಾಜಾ ವೆಂಕಟಪ್ಪ ನಾಯಕ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಘೋಷಣೆಗಳನ್ನು ಕೂಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಎಪಿಎಮ್‌ಸಿ ಮಾಜಿ ಸದಸ್ಯ ಮಲ್ಲಣ್ಣ ಸಾಹುಕಾರ ಮುಧೋಳ ನರಸಿಂಗಪೇಟ,ನಗರಸಭೆ ಸದಸ್ಯ ಜುಮ್ಮಣ್ಣ ಕೆಂಗುರಿ, ನಗರಸಭೆ ಮಾಜಿ ಸದಸ್ಯ ಮಲ್ಲಣ್ಣ ಹುಬ್ಬಳ್ಳಿ, ದಾವುದ್ ಸಾಬ್ ಮೆಡಿಕಲ್, ಬಸವರಾಜ ಗುಡ್ಡಕಾಯಿ, ಭೀಮರಾಯ ಕುಂಬಾರ, ಬಲಭೀಮ ನಾಯಕ ಗುಡ್ಡಕಾಯಿ,ಮಲ್ಲಪ್ಪ ಮಂದಾಲೆ ಸೇರಿದಂತೆ ಅಭಿಮಾನಿಗಳು ಭಾಗವಹಿಸಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News