ಸುರಪುರ: ಕಲಬುರಗಿಯ ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಲಿಂಗೈಕ್ಯ ಡಾ. ಶರಣಬಸವಪ್ಪ ಅವರ ಪ್ರಥಮ ವರ್ಷದ ಪುಣ್ಯಸ್ಮರಣೋತ್ಸವದ ಅಂಗವಾಗಿ ಪಟ್ಟಣದ ವೀರಪ್ಪ ನಿಷ್ಠಿ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಕಾಲೇಜು ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಶರಣಬಸಪ್ಪ ಸಾಲಿ ಮಾತನಾಡಿ, ಪರಿಸರ ಸಂರಕ್ಷಣೆ, ಹಸಿರು ಪರಿಸರ ನಿರ್ಮಾಣ ಹಾಗೂ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮತ್ತು ಸಾಮಾಜಿಕ ಜವಾಬ್ದಾರಿ ಬೆಳೆಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.

ಕಾಲೇಜು ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಟ್ಟು, ಅವುಗಳ ನಿರಂತರ ಆರೈಕೆ ಹಾಗೂ ಸಂರಕ್ಷಣೆಗೆ ವಿದ್ಯಾರ್ಥಿಗಳು ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮಕ್ಕೆ ಅಗತ್ಯವಿದ್ದ ಸಸಿಗಳನ್ನು ತಾಲೂಕು ಅರಣ್ಯ ಇಲಾಖೆಯ ಕಚೇರಿಯಿಂದ ಒದಗಿಸಲಾಗಿತ್ತು. ಸಸಿಗಳನ್ನು ಒದಗಿಸಿ ಕಾರ್ಯಕ್ರಮಕ್ಕೆ ಸಹಕರಿಸಿದ ತಾಲೂಕು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಾಲೇಜಿನ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರಾದ ಪ್ರೊ. ಶರಣಗೌಡ ಪಾಟೀಲ, ಪ್ರೊ. ಶಿವನಗೌಡ ಪಾಟೀಲ, ಪ್ರೊ. ಸಾಹೇಬಗೌಡ, ಪ್ರೊ. ಪೂಜಾ, ಪ್ರೊ. ಸುನಿಲ್ ಮಿಶ್ರಾ ಹಾಗೂ ಪ್ರೊ. ಸಿದ್ದನಗೌಡ ಪಾಟೀಲ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ಪ್ರಭಾಕರ ಪಾಟೀಲ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಎನ್‍ಎಸ್‌ಎಸ್ ಸ್ವಯಂಸೇವಕರು ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor