×
Ad

ಗಂಡು ಸಂತಾನಹರಣ ಚಿಕಿತ್ಸೆ ಬಗ್ಗೆ ಯಾಕೆ ಅರಿವು ಮೂಡಿಸುತ್ತಿಲ್ಲ: ಶಾಸಕ ಶರಣಗೌಡ ಕಂದಕೂರ

Update: 2024-11-30 18:04 IST

ಯಾದಗಿರಿ : ಸಾರ್ವಜನಿಕ ಆಸ್ಪತ್ರೆಯ̧ಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳಲ್ಲಿ ಗಂಡು ಸಂತಾನಹರಣ ಚಿಕಿತ್ಸೆ ಬಗ್ಗೆ ಅಧಿಕಾರಿಗಳು ಯಾಕೆ ಅರಿವು ಮೂಡಿಸುತ್ತಿಲ್ಲ ಎಂದು ಗುರುಮಿಠಕಲ್ ಶಾಸಕ ಶರಣಗೌಡ ಕಂದಕೂರ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ಜರುಗಿತು.

ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಲೋಕಸಭಾ ಸದಸ್ಯ ಜಿ.ಕುಮಾರನಾಯಕ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ ( ದಿಶಾ) ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಕುಟುಂಬ ಕಲ್ಯಾಣ ಕಾರ್ಯಕ್ರಮದಲ್ಲಿ ಸಂತಾನ ಹರಣ ಶಸ್ತ್ರ ಚಿಕಿತ್ಸೆಗೆ 8,190 ಗುರಿಯಿದ್ದು, 5,358 ಗುರಿ ಸಾಧಿಸಿ ಒಟ್ಟು ಶೇ.65 ರಷ್ಟು ಗುರಿ ತಲುಪಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

ಆರೋಗ್ಯ ಇಲಾಖೆಯಲ್ಲಿ ಇರುವ ವಿವಿಧ ಕಾರ್ಯಕ್ರಮಗಳ ಬಗ್ಗೆ ಅಧಿಕಾರಿಗಳು ಅರಿವು ಮೂಡಿಸಬೇಕು. ಸಂತಾನಹರಣ ಕುರಿತು ಪುರುಷರಿಗೆ ಯಾಕೆ ನೀವು ಮಾಹಿತಿ ನೀಡುತ್ತಿಲ್ಲ. ಅವರು ಇದರ ಸದುಪಯೋಗ ಪಡೆದುಕೊಳ್ಳುವಂತಾಗಬೇಕು ಎಂದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News