ಯಾದಗಿರಿ | ಜ.12 ರಿಂದ 18ರ ವರೆಗೆ ಶ್ರೀಮೈಲಾರಲಿಂಗೇಶ್ವರ ದೇವಸ್ಥಾನ ಜಾತ್ರೆ : ದೇವಸ್ಥಾನದಲ್ಲಿ ತೆಂಗಿನಕಾಯಿ ಒಡೆಯದಂತೆ ನಿಷೇಧ
Update: 2025-12-20 21:13 IST
ಯಾದಗಿರಿ, ಡಿ. 20: ತಾಲೂಕಿನ ಮೈಲಾಪುರ ಗ್ರಾಮದ ಮೈಲಾರಲಿಂಗೇಶ್ವರ ದೇವಸ್ಥಾನದ ಜಾತ್ರೆ 2026ರ ಜನವರಿ 12ರಿಂದ 18ರವರೆಗೆ ನಡೆಯಲಿದ್ದು, ಅಡುಗೆಗೆ ಕೆರೆಯ ನೀರು ಬಳಕೆ, ದೇವಸ್ಥಾನದ ಆವರಣದಲ್ಲಿ ತೆಂಗಿನಕಾಯಿ ಒಡೆಯುವುದು, ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಆದೇಶ ಹೊರಡಿಸಿದ್ದಾರೆ.
ಜನರ ಆರೋಗ್ಯದ ದೃಷ್ಟಿಯಿಂದ ದೇವಸ್ಥಾನದ ಕೆರೆಯ ನೀರನ್ನು ಯಾವುದೇ ಕಾರಣಕ್ಕೂ ಅಡುಗೆಗೆ ಮತ್ತು ಕುಡಿಯಲು ಬಳಸಬಾರದು. ದೇವಸ್ಥಾನದ ಆವರಣದಲ್ಲಿ ತೆಂಗಿನಕಾಯಿ ಒಡೆಯುವುದು. ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.