×
Ad

ಯಾದಗಿರಿ | ಹೃದಯಾಘಾತದಿಂದ ಪೌರ ಕಾರ್ಮಿಕ ಮೃತ್ಯು

Update: 2026-03-09 21:14 IST

ಯಾದಗಿರಿ: ನಗರಸಭೆಯ ಪೌರ ಕಾರ್ಮಿಕನೊಬ್ಬ ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಎದೆನೋವಿನಿಂದ ಬಳಲಿ, ನಂತರ ಸ್ವಲ್ಪ ಸಮಯದಲ್ಲಿಯೇ ಹೃದಯಾಘಾತಕ್ಕೆ ಬಲಿಯಾದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

ನಗರದ ಡಾ.ಬಿ.ಆರ್.ಅಂಬೇಡ್ಕರ್ ನಗರದ ನಿವಾಸಿ ಪಿಲ್ಲಪ್ಪ ಬೊಮ್ಮನ್ ಮೃತಪಟ್ಟ ಪೌರ ಕಾರ್ಮಿಕರಾಗಿದ್ದಾರೆ.

ಸೋಮವಾರ ಬೆಳಗ್ಗೆ ಎಂದಿನಂತೆ ಕಸ ಎತ್ತುವ ಕೆಲಸಕ್ಕೆ ಬಂದಿದ್ದ ಪಿಲ್ಲಪ್ಪ ಅವರಿಗೆ ಅಚಾನಕ್ ಸುಸ್ತು ಕಾಣಿಸಿಕೊಂಡು ಎದೆನೋವು ಉಂಟಾಗಿದೆ. ಬಳಿಕ ಅವರ ತಮ್ಮ ಮನೆಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಿದರು. ಆದರೆ ಸ್ವಲ್ಪ ಸಮಯದಲ್ಲೇ ನೋವು ಹೆಚ್ಚಾದ ಕಾರಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ನಗರಸಭೆ ಪೌರಾಯುಕ್ತ ಉಮೇಶ ಚವ್ಹಾಣ ಹಾಗೂ ಸಿಬ್ಬಂದಿ ಭೇಟಿ ನೀಡಿ ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಮೃತ ಪಿಲ್ಲಪ್ಪ ಅವರಿಗೆ ತಾಯಿ, ಪತ್ನಿ ಹಾಗೂ ಮೂವರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗ ಇದ್ದಾರೆ. ಮಾ.10ರಂದು ಅವರ ಅಂತ್ಯಕ್ರಿಯೆ ನಡೆಯಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News