ಯಾದಗಿರಿ | ಮೈಲಾರಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನಿರಂತರ ಪ್ರಯತ್ನ : ಶಾಸಕ ಚೆನ್ನಾರೆಡ್ಡಿ
ಯಾದಗಿರಿ, ಜ.12: ಮೈಲಾಪುರ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆ ಕುರಿತಂತೆ ಸರಕಾರದ ಮಟ್ಟದಲ್ಲಿ ನಿರಂತರ ಪ್ರಯತ್ನಿಸುತ್ತಿರುವುದಾಗಿ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಅವರು ಹೇಳಿದ್ದಾರೆ.
ಮೈಲಾರಲಿಂಗೇಶ್ವರ ದೇವಸ್ಥಾನದ ವ್ಯಾಪ್ತಿಯಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ, ಕಾರ್ಯನಿರ್ವಾಹಕ ಅಧಿಕಾರಿಗಳ ನೂತನ ದೇವಸ್ಥಾನ ಕಾರ್ಯಾಲಯ ಉದ್ಘಾಟಿಸಿ, ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.
ಶ್ರೀ ಮೈಲಾಪುರ ಜಾತ್ರೆಗೆ ಲಕ್ಷಾಂತರ ಜನ ಆಗಮಿಸು
ವುದರಿಂದ ಆರಂಭ ಹಾಗೂ ಜಾತ್ರಾ ಕೊನೆಯಲ್ಲಿ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಬೇಕು. ವಿಶೇಷವಾಗಿ ಸರಪಳಿ ಹರಿಯುವ ಪದ್ಧತಿ ಸಂದರ್ಭದಲ್ಲಿ, ಜಾತ್ರೆ ವ್ಯಾಪ್ತಿಯಲ್ಲಿ ಸೂಕ್ತ ಪೋಲಿಸ್ ಬಂದೋಬಸ್ತ್, ಆರೋಗ್ಯ, ಅಗ್ನಿಶಾಮಕ ಇಲಾಖೆ,ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳಿಂದ ಅವಶ್ಯಕ ಕ್ರಮ, ಶೌಚಾಲಯಗಳ ಸೂಕ್ತ ವ್ಯವಸ್ಥೆ ಮಾಡುವಂತೆ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್, ಗ್ರಾಮ ಪಂಚಾಯತ್ ಅಧ್ಯಕ್ಷ ಮಲ್ಲಿಕಾರ್ಜುನ, ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶ್ರೀ ಧರಣೇಶ್, ಡಿವೈಎಸ್ ಪಿ ಭರತ ತಳವಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀ ತಿಪ್ಪಣ್ಣ ಶಿರಸಗಿ, ತಹಸೀಲ್ದಾರ ಸುರೇಶ್ ಅಂಕಲಗಿ, ಧರ್ಮದತ್ತಿ ಇಲಾಖೆಯ ಸಹಾಯಕ ನಿರ್ದೇಶಕ ವಿಶ್ವನಾಥ, ಮಹದೇವಪ್ಪ ಪೂಜಾರಿ ಉಪಸ್ಥಿತರಿದ್ದರು.