ಯಾದಗಿರಿ | ಡಿಡಿಯು ಸಿಬಿಎಸ್‌ಇ ಶಾಲೆಯಲ್ಲಿ ದಶಮ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ
ಯಾದಗಿರಿ: ನಗರದ ಡಿಡಿಯು ಸಮೂಹ ಸಂಸ್ಥೆಗಳ ಅಂಗ ಸಂಸ್ಥೆಯಾದ DDU CBSE ಶಾಲೆಯಲ್ಲಿ ದಶಮ ತರಗತಿ ವಿದ್ಯಾರ್ಥಿಗಳಿಗೆ ಭಾವಪೂರ್ಣ ಬೀಳ್ಕೊಡುಗೆ ಸಮಾರಂಭವನ್ನು ವಿಜೃಂಭಣೆಯಿಂದ ಆಯೋಜಿಸಲಾಯಿತು.
ಕಾರ್ಯಕ್ರಮವು ಆಡಳಿತಾಧಿಕಾರಿ ಮಲ್ಲಿಕಾರ್ಜುನ ಮೆಟಿ ಅವರ ಉಪಸ್ಥಿತಿಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯಾದಗಿರಿಯ ಅರ್ಬನ್ ಸೆಂಟರ್‌ನ ಡಾ. ವಿನಿತಾ ಮಾತನಾಡಿ, ವಿದ್ಯಾರ್ಥಿಗಳು ಪರಿಶ್ರಮ, ಶಿಸ್ತು ಹಾಗೂ ಆತ್ಮವಿಶ್ವಾಸದೊಂದಿಗೆ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಮುಖ ಸದಸ್ಯರಿಗೆ ಸನ್ಮಾನ ಸಲ್ಲಿಸಲಾಯಿತು. DDU ICSE ಶಾಲೆಯ ಪ್ರಾಂಶುಪಾಲರಾದ ರಾಜೇಶ್ ಕುಮಾರ್, ಡಿಡಿಯು ಸಿಬಿಎಸ್‌ಇ ಶಾಲೆಯ ಪ್ರಾಂಶುಪಾಲರಾದ ಬಾಬಿನ್ ರಾಜ್ ಹಾಗೂ ವಸತಿ ನಿಲಯ ವಾರ್ಡನ್ ನಿಂಗಣ್ಣ ಹೊಸಮನಿ ಅವರನ್ನು ಗೌರವಿಸಲಾಯಿತು.
ಸಂಸ್ಥೆಯ ವ್ಯವಸ್ಥಾಪಕರಾದ ರಾಜಶೇಖರ್, ರವಿ ಪವಾರ್ ಮತ್ತು ಮಹಮ್ಮದ್ ಸೌದಾಗರ್ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಈ ವರ್ಷ ಡಿಡಿಯು ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳಿಂದ ಒಟ್ಟು 113 ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಗೆ ಹಾಜರಾಗಲಿದ್ದಾರೆ.
ಈ ವೇಳೆ ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡು, ಶಿಕ್ಷಕರು ಸ್ನೇಹಪೂರ್ಣವಾಗಿ ಮಾರ್ಗದರ್ಶನ ನೀಡಿ ತಮ್ಮ ಭವಿಷ್ಯ ನಿರ್ಮಾಣಕ್ಕೆ ಶ್ರಮಪಟ್ಟಿದ್ದಾರೆ ಎಂದು ಕೃತಜ್ಞತೆ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಯಶಸ್ಸು ಸಾಧಿಸಿ ಮತ್ತೆ ಶಾಲೆಗೆ ಬಂದು ತಮ್ಮ ಯಶೋಗಾಥೆಗಳನ್ನು ಹಂಚಿಕೊಳ್ಳುವುದಾಗಿ ಭರವಸೆ ನೀಡಿದರು.
ಇದೇ ವೇಳೆ ಆಡಳಿತ ಮಂಡಳಿ ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಲು ಶುಭ ಹಾರೈಸಿದರು.