×
Ad

ಯಾದಗಿರಿ | ಆರೆಸ್ಸೆಸ್ ಪಥಸಂಚಲನದಲ್ಲಿ ಸರಕಾರಿ ಶಾಲಾ ಶಿಕ್ಷಕ ಭಾಗಿ : ಫೋಟೋ ವೈರಲ್

Update: 2025-10-22 21:38 IST

ಯಾದಗಿರಿ: ಇತ್ತೀಚೆಗೆ ಯಾದಗಿರಿ ಜಿಲ್ಲೆಯ ಬೆಳಗೇರಾ ಗ್ರಾಮದ ಆರೆಸ್ಸೆಸ್ ಪಥಸಂಚಲನದಲ್ಲಿ ಸರಕಾರಿ ಶಿಕ್ಷಕರೊಬ್ಬರು ಭಾಗವಹಿಸುವ ದೃಶ್ಯ ವೈರಲ್ ಆಗಿದೆ.

ಕೂಯಿಲೂರ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಅಶೋಕ ಕಲಾಲ ಅವರು ಸಂಚಲನದಲ್ಲಿ ಭಾಗವಹಿಸಿದ್ದಾರೆಂದು ತಿಳಿದು ಬಂದಿದೆ.

ಸರ್ಕಾರಿ ನೌಕರರು ರಾಜಕೀಯ ಅಥವಾ ಸಂಘಟನಾ ಚಟುವಟಿಕೆಯಲ್ಲಿ ನೇರವಾಗಿ ಪಾಲ್ಗೊಳ್ಳುವುದು ಸರ್ಕಾರಿ ಸೇವಾ ನಿಯಮಗಳ ಉಲ್ಲಂಘನೆ ಯಾಗಿದ್ದು, ಈ ಘಟನೆಯ ಹಿನ್ನೆಲೆಯಲ್ಲಿ ಸ್ಥಳೀಯ ವಲಯಗಳಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ.

ಈ ಕುರಿತು ಪ್ರತಿಕ್ರಿಯಿಸಿದ ಯಾದಗಿರಿ ಡಿಡಿಪಿಐ ಅವರು, “ಬಿಇಓ ವರದಿ ಪಡೆಯಲಾಗುತ್ತಿದೆ. ತನಿಖೆ ನಡೆಸಿ ಸರ್ಕಾರದ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News