×
Ad

ಯಾದಗಿರಿ | ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮುಖಂಡರು : ಪಕ್ಷಕ್ಕೆ ಬರಮಾಡಿಕೊಂಡ ಡಿಕೆಶಿ

ಶಾಸಕ ತುನ್ನೂರು ನೇತೃತ್ವದಲ್ಲಿ ಪಕ್ಷ ಸಂಘಟಿಸಿ : ಡಿಸಿಎಂ ಡಿ.ಕೆ.ಶಿವಕುಮಾರ್‌ ಕರೆ

Update: 2025-10-29 16:47 IST

ಯಾದಗಿರಿ: ಮತಕ್ಷೇತ್ರ ಸೇರಿದಂತೆಯೇ ಗಿರಿಜಿಲ್ಲೆಯಲ್ಲಿ ಶಾಸಕರೂ ಆಗಿರುವ ಹಿರಿಯ ಕಾಂಗ್ರೆಸ್ ಮುಖಂಡರಾದ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ನೇತೃತ್ವದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟಿಸುವ ಕೆಲಸ ಮಾಡುವಂತೆಯೇ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು.

ಬೆಂಗಳೂರಿನ ಅವರ ನಿವಾಸದಲ್ಲಿ ಬುಧವಾರ ಶಾಸಕ ತುನ್ನೂರು ಸಮ್ಮುಖದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಕೋಲಿ ಸಮಾಜದ ಮಾಜಿ ಜಿಲ್ಲಾಧ್ಯಕ್ಷ ಹನುಮಂತರೆಡ್ಡಿ ಮಡ್ಡಿ ಹಾಗೂ ನಗರಸಭೆ ಮಾಜಿ ಅಧ್ಯಕ್ಷ ಸುರೇಶ ಕೋಟಿಮನಿ ಅವರನ್ನು ಸ್ವಾಗತಿಸಿಕೊಂಡು ಮಾತನಾಡಿದ ಅವರು, ಯಾದಗಿರಿ ಜಿಲ್ಲೆಯಲ್ಲಿ ಕಳೆದ ಹಲವಾರು ದಶಕಗಳಿಂದ ಕಾಂಗ್ರೆಸ್ ಪಕ್ಷ ಭದ್ರಕೋಟೆಯಂತಿದೆ. ಮುಂಬರುವ ಸ್ಥಳಿಯ ಸಂಸ್ಥೆಗಳ ಚುನಾವಣೆ ಸೇರಿದಂತೆಯೇ ಎಲ್ಲ ಚುನಾವಣೆಗಳಲ್ಲಿ ಪಕ್ಷ ಗೆಲ್ಲುವ ರೀತಿಯಲ್ಲಿ‌ ಕೆಲಸ ಮಾಡಬೇಕೆಂದು ಡಿಕೆಶಿ ಸಲಹೆ ನೀಡಿದರು.

ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಮಾತನಾಡಿ, ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಕೋಟ್ಯಾಂತರ ಜನರ ಕಲ್ಯಾಣಕ್ಕೆ ಮುನ್ನುಡಿ ಬರೆದಿದೆ. ಕೆಕೆಆರ್‌ಡಿಬಿ ಅನುದಾನ ಸೇರಿದಂತೆಯೇ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಅನುದಾನದಿಂದ ಸಾಕಷ್ಟು ಅಭಿವೃದ್ದಿ‌ ಕೆಲಸಗಳು ಮಾಡಲಾಗುತ್ತಿದೆ ಎಂದರು.

ಈ ವೇಳೆ ಸುರೇಶ ಮಡ್ಡಿ, ಸಾಯಿಬಣ್ಣ ಕೆಂಗುರಿ, ಚಂದ್ರಶೇಖರ ಕಾವಲಿ ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News