ಯಾದಗಿರಿ | ಮಹಿಳಾ ನೌಕರರ ಹಕ್ಕುಗಳಿಗಾಗಿ ಸಂಘಟಿತ ಹೋರಾಟ ಅಗತ್ಯ: ರೋಶಿನಿ ಗೌಡ
ಯಾದಗಿರಿ: ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಮಹಿಳಾ ನೌಕರರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತಲು ಮತ್ತು ಅವರ ಹಕ್ಕುಗಳನ್ನು ರಕ್ಷಿಸಲು ಸಂಘಟನೆಯನ್ನು ಬಲಪಡಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ರೋಶಿನಿ ಗೌಡ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಶೇ.52 ರಷ್ಟು ಮಹಿಳಾ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಮಹಿಳಾ ನೌಕರರು ಎದುರಿಸುತ್ತಿರುವ ಸಮಸ್ಯೆಗಳು, ಸವಲತ್ತುಗಳನ್ನು ಪಡೆಯಲು ಸಂಘಟನೆ ಅವಶ್ಯಕವಾಗಿದೆ. ಎಲ್ಲಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಸಂಘದ ಸದಸ್ಯತ್ವ ಪಡೆಯುವ ಮೂಲಕ ಸಂಘಟನೆ ಬಲಗೊಳಿಸಬೇಕೆಂದು ಮನವಿ ಮಾಡಿದರು.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ನೌಕರರಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಸಮಸ್ಯೆ ಗಳ ಪರಿಹಾರಕ್ಕೆ ಸಂಘಟಿತ ಹೋರಾಟಕ್ಕೆ ಅಣಿಗೊಳಿಸಲಾಗುತ್ತಿದೆ ಎಂದರು.
ಮೇರಿ ದೇವಾಸಿಯಾ ಜನ್ಮದಿನ ಸೆ.13 ರಂದು ಮಹಿಳಾ ಸರ್ಕಾರಿ ನೌಕರರ ದಿನಾಚರಣೆ ಸರ್ಕಾರ ಈಗಾಗಲೇ ಸಿಎಂ ಮತ್ತು ಡಿಸಿಎಂ ಘೋಷಣೆ ಮಾಡಿದ್ದು, ಅಭಿನಂದನಾರ್ಹ ಎಂದರು.
ಸಮಸ್ಯೆಗಳ ನಿವಾರಣೆಗೆ ಎಲ್ಲಾ ಮಹಿಳಾ ನೌಕರರು ಸಂಘದೊಂದಿಗೆ ಹೆಜ್ಜೆಹಾಕುವ ಮೂಲಕ ಸಂಘಟಿತ ಪ್ರ ಪ್ರಯತ್ನಕ್ಕೆ ಬೆಂಬ ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜ್ಯ ಖಜಾಂಚಿ ಡಾ.ವೀಣಾ ಕೃಷ್ಣಮೂರ್ತಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಆಶಾರಾಣಿ ಹಾಗೂ ಸ್ಥಳಿಯ ಸಂಘದ ಅನುಸೂಯಾ, ರೂಪಾ ಜಿ., ರೂಪಾ ಹಿರೇಮಠ, ಸಾವಿತ್ರಿ, ಲೀಲಾ ಸೇರಿದಂತೆಯೇ ಇತರರಿದ್ದರು.