×
Ad

ಯಾದಗಿರಿ | ಮಕ್ಕಳೇ ಆತ್ಮವಿಶ್ವಾಸದಿಂದ ಅಧ್ಯಯನ ನಡೆಸಿ : ಶಶಿಧರ ಕೋಸಂಬೆ ಕರೆ

Update: 2025-12-20 21:16 IST

ಯಾದಗಿರಿ: ಆತ್ಮವಿಶ್ವಾಸದೊಂದಿಗೆ ಮಕ್ಕಳು ಶ್ರದ್ಧಾ ಭಕ್ತಿಯಿಂದ ಅಭ್ಯಾಸ ಮಾಡಿದರೆ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಸಲಹೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು, ಮಕ್ಕಳು ಒತ್ತಡಕ್ಕೆ ಒಳಗಾಗದೆ ಶ್ರದ್ಧೆಯಿಂದ ಓದಬೇಕು. ಯಾವುದೇ ಸಂಕೋಚವಿಟ್ಟುಕೊಳ್ಳದೆ ಆತ್ಮವಿಶ್ವಾಸದಿಂದ ಇರಬೇಕು ಎಂದರು.

ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯಗಳ ವ್ಯವಸ್ಥೆ ಸಮರ್ಪಕವಾಗಿ ಕಲ್ಪಿಸಬೇಕು. ಡಿಡಿಪಿಐ, ರಸ್ತೆ ಸಾರಿಗೆ ಸಂಸ್ಥೆ ಹಾಗೂ ಸಂಬಂಧಿಸಿದ ಅಧಿಕಾರಿಗಳು ಸಮನ್ವಯದಿಂದ ಸಮಸ್ಯೆಗಳನ್ನು ಪರಿಹರಿಸುವಂತೆ ಸೂಚನೆ ನೀಡಿದರು.

ಶಿಕ್ಷಕರು ಮಕ್ಕಳಿಗೆ ಕಿರುಕುಳ ನೀಡಬಾರದು. ಗ್ರಾಮಗಳ ಶಾಲಾ, ಬಸ್ ನಿಲ್ದಾಣಗಳ ವ್ಯಾಪ್ತಿಯಲ್ಲಿ ಪೋಲಿಸ್ ಬೀಟ್ ಹೆಚ್ಚಿಸಿ ಸಂರಕ್ಷಣೆ ನೀಡಬೇಕು. ಪೋಲಿಸ್ ಇಲಾಖೆಯಿಂದ ತೆರೆದ ಮನೆ ಕಾರ್ಯಕ್ರಮ ನಡೆಯುವಂತೆ ನೋಡಿಕೊಳ್ಳಲು ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಶಿರಸಗಿ, ಡಿಡಿಪಿಐ ಚನ್ನಬಸಪ್ಪ ಮುಧೋಳ,ಡಿಎಚ್‌ಒ ಮಹೇಶ್ ಬಿರಾದಾರ ಹಾಗೂ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News