×
Ad

ಯಾದಗಿರಿ | ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಜಾಬ್ ಕಾರ್ಡ್‌ಗಳ ಇ-ಕೆವೈಸಿ ಮಾಡಿಸಿ : ಸಿಇಒ ಲವೀಶ್ ಒರಡಿಯಾ

ಮಹಾತ್ಮಗಾಂಧಿ ನರೇಗಾ ಯೋಜನೆಯ ಉದ್ಯೋಗ ಚೀಟಿಗೆ ಇ-ಕೆವೈಸಿ ಅಭಿಯಾನ

Update: 2025-10-14 18:56 IST

ಯಾದಗಿರಿ: ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಕುಟುಂಬಗಳ ಜಾಬ್ ಕಾರ್ಡ್ ಮಾನ್ಯತಾ ಅವಧಿಯನ್ನು ಇ-ಕೆವೈಸಿ ಮೂಲಕ ಪೂರ್ಣಗೊಳಿಸಲಾಗುತ್ತಿದ್ದು, ಎಲ್ಲಾ ನರೇಗಾ ಕೂಲಿ ಕಾರ್ಮಿಕರು ಈ ಅಭಿಯಾನದಲ್ಲಿ ಭಾಗವಹಿಸಿ ಕಡ್ಡಾಯವಾಗಿ ತಮ್ಮ ಜಾಬ್ ಕಾರ್ಡ್ ಗಳ ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ ಅವರು ಮನವಿ ಮಾಡಿದ್ದಾರೆ.

ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಆದೇಶ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ ಸೂಚನೆಯಂತೆ ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನೋಂದಾಯಿತ ಸಕ್ರಿಯ ಕೂಲಿಕಾರರ ಜಾಬ್ ಕಾರ್ಡ್ ಅನ್ನು ಇ-ಕೆವೈಸಿ ಮೂಲಕ ಮೌಲ್ಯೀಕರಿಸುತ್ತಿದ್ದು, ನರೇಗಾ ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ಸಕ್ರಿಯ ಕುಟುಂಬಗಳ ಜಾಬ್ ಕಾರ್ಡ್ ಮಾನ್ಯತಾ ಅಭಿಯಾನದ ಮಾದರಿಯಲ್ಲಿ ಅತೀ ತುರ್ತಾಗಿ ಇ-ಕೆವೈಸಿ ಮೂಲಕ ಪೂರ್ಣಗೊಳಿಸಲು ಸಿಬ್ಬಂದಿಗಳಿಗೆ ಅಗತ್ಯ ತರಬೇತಿಯನ್ನು ನೀಡಲಾಗಿದೆ ಎಂದರು.

ತರಬೇತಿ ಪಡೆದ ಎಲ್ಲಾ ಸಿಬ್ಬಂದಿಗಳು ಜಾಬ್ ಕಾರ್ಡ್ ಗಳಿಗೆ ಇ-ಕೆವೈಸಿ ಮಾಡುವ ಪ್ರಕ್ರಿಯೆಯಲ್ಲಿ ತೊಡಗಿದ್ದು, ಇ-ಕೆವೈಸಿ ಪ್ರಕ್ರಿಯೆಯಲ್ಲಿ ಕೂಲಿಕಾರ್ಮಿಕರು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇ-ಕೆವೈಸಿ ಮಾಡಿಕೊಳ್ಳದ ಜಾಬ್-ಕಾರ್ಡ್ಗಳು ಕಾರ್ಡ್ ನಿಷ್ಕ್ರಿಯವಾಗುತ್ತವೆ ಎಂದರು.

ಮಹಾತ್ಮಗಾಂಧಿ ನರೇಗಾ ಯೋಜನೆಯ ಹೆಚ್ಚು ಪಾರದರ್ಶಕ ಅನುಷ್ಟಾನಕ್ಕೆ ಮತ್ತೊಂದು ಹೆಜ್ಜೆ ಇ-ಕೆವೈಸಿ ಆಗಿದ್ದು, ನರೇಗಾ ಕೂಲಿಕಾರರು, ಕಾಯಕ ಬಂಧುಗಳು ತಮ್ಮ ಜಾಬ್ ಕಾರ್ಡ್ಗಳಿಗೆ ಇ-ಕೆವೈಸಿ ಅಷ್ಟೇಟ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ನಮ್ಮ ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಶಹಾಪುರ 51,944, ಸುರಪುರ 56,669, ಯಾದಗಿರಿ 40,934, ಗುರುಮಠಕಲ್ 22,022, ವಡಗೇರಾ 32,215 ಹಾಗೂ ಹುಣಸಗಿ 48,155 ಸೇರಿ ಒಟ್ಟು 2,51,939 ಜನ ಸಕ್ರಿಯ ಕೂಲಿಕಾರ್ಮಿಕರಿದ್ದು, ಎಲ್ಲರೂ ಸಹ ತಪ್ಪದೇ ತಮ್ಮ ಜಾಬ್ ಕಾರ್ಡ್ಗೆ ಇ-ಕೆವೈಸಿ ಅಪ್ಲೇಟ್ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ಗ್ರಾಮ ಪಂಚಾಯತ್‌ ಪಿಡಿಓ, ಕಾರ್ಯದರ್ಶಿ, ಡಿಇಒ, ಬಿಎಫ್ಟಿ, ಜಿಕೆಎಂ ಸೇರಿದಂತೆ ನರೇಗಾ ಸಿಬ್ಬಂದಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News